ಶನಿವಾರ, ಜೂನ್ 19, 2021
28 °C

ವೈರಮುಡಿ ಉತ್ಸವ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಜಿಲ್ಲೆಯ ಮೇಲುಕೋಟೆಯಲ್ಲಿ ಚಲುವನಾರಾಯಣಸ್ವಾಮಿಗೆ ಕಿರೀಟ ತೊಡಿ­ಸುವ ವೈರಮುಡಿ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಆಗಿವೆ. ಮಾರ್ಚ್‌ 13­ರಂದು ರಾತ್ರಿ 8 ಗಂಟೆಗೆ ಕಿರೀಟ ಧಾರಣೆಗೆ ಚಾಲನೆ ಸಿಗಲಿದೆ.ಚಲುವನಾರಾಯಣಸ್ವಾಮಿ ಮೂರ್ತಿಗೆ ವಜ್ರ ಖಚಿತ ವೈರಮುಡಿ ಕಿರೀಟ ತೊಡಿ­ಸಿದ ನಂತರ ಹೂವಿನಿಂದ ಅಲಂಕರಿಸಿದ ಪಲ್ಲಕ್ಕಿಯಲ್ಲಿ ಕೂರಿಸಿ ಬೆಳಗಿನ ಜಾವ 3.30­ರವರೆಗೂ ಮೆರವಣಿಗೆ ನಡೆಯಲಿದೆ.ಜಿಲ್ಲಾ ಖಜಾನೆಯಲ್ಲಿರುವ ವೈರಮುಡಿ ಕಿರೀಟ ಹಾಗೂ ಇತರ ಆಭರಣಗಳಿರುವ ಗಂಟು­ಗಳನ್ನು ಮಾರ್ಚ್‌ 13ರಂದು ಬೆಳಿಗ್ಗೆ 7 ಗಂಟೆಗೆ ಮಂಡ್ಯದಿಂದ ಮೇಲು­ಕೋಟೆಗೆ ತೆಗೆದುಕೊಂಡು ಹೋಗಲಾಗುವುದು.ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ರಾಜ್ಯದ ವಿವಿಧೆಡೆಗಳಿಂದ ಲಕ್ಷಾಂತರ ಭಕ್ತರು ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ದೇವಾಲಯದಲ್ಲಿ ನಡೆಯುವ ಮಹೋತ್ಸವದ ದೃಶ್ಯಗಳನ್ನು ಪ್ರಸಾರ ಮಾಡಲು ದೇವಸ್ಥಾನದ ಹೊರಗಡೆ 15 ಎಲ್‌ಸಿಡಿ ಟಿ.ವಿ.ಗಳನ್ನು ಅಳವಡಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರು, ಬಸ್‌್ ವ್ಯವಸ್ಥೆ ಮಾಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.