ವೊಡಾಫೋನ್ ತೀರ್ಪು: ಮರು ಪರಿಶೀಲನೆಗೆ ಕೇಂದ್ರ ಸರ್ಕಾರ ಮೊರೆ

7

ವೊಡಾಫೋನ್ ತೀರ್ಪು: ಮರು ಪರಿಶೀಲನೆಗೆ ಕೇಂದ್ರ ಸರ್ಕಾರ ಮೊರೆ

Published:
Updated:

ನವದೆಹಲಿ (ಪಿಟಿಐ):   ದೂರಸಂಪರ್ಕ ಸಂಸ್ಥೆ ವೊಡಾಫೋನ್ ಇಂಟರ್‌ನ್ಯಾಷನಲ್ ಹೋಲ್ಡಿಂಗ್ಸ್, ರೂ. 11 ಸಾವಿರ ಕೋಟಿಗಳಷ್ಟು ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ ಎನ್ನುವ  ತೀರ್ಪು ಮರು ಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿಕೊಂಡಿದೆ.

2007ರಲ್ಲಿ ಹಚ್ ಎಸ್ಸಾರ್ ಸಂಸ್ಥೆ ಸ್ವಾಧೀನಪಡಿಸಿಕೊಂಡ ವಹಿವಾಟಿಗೆ ಸಂಬಂಧಿಸಿದಂತೆ ವೊಡಾಫೋನ್  ರೂ.   11,000 ಕೋಟಿಗಳಷ್ಟು  ಆದಾಯ ತೆರಿಗೆ ಪಾವತಿಸಬೇಕಾದ ಅಗತ್ಯ ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಕಳೆದ ತಿಂಗಳ 20ರಂದು ತೀರ್ಪು ನೀಡಿದ್ದ ಕೋರ್ಟ್‌ನ ತ್ರಿಸದಸ್ಯ ಪೀಠವು, ಸಾಗರದಾಚೆ ನಡೆದ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಪಾವತಿಸಬೇಕು ಎನ್ನುವ ವಾದವನ್ನು ಎತ್ತಿ ಹಿಡಿದಿದ್ದ ಬಾಂಬೆ ಹೈಕೋರ್ಟ್‌ನ ತೀರ್ಪನ್ನು ವಜಾಗೊಳಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry