ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಸಹಕಾರಿ

7

ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಸಹಕಾರಿ

Published:
Updated:

ಶಿಡ್ಲಘಟ್ಟ:  ಮಕ್ಕಳಲ್ಲಿ ಶಿಸ್ತು ಮತ್ತು ದೇಶಭಕ್ತಿಯನ್ನು ಮೂಡಿಸುವ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ ಎಂದು ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ತರಬೇತಿ ಆಯುಕ್ತ ಪಿ.ಬಿ.ಪ್ರಕಾಶ್ ತಿಳಿಸಿದರು. ತಾಲ್ಲೂಕಿನ ದೇವರಮಳ್ಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ಕೌಟ್ಸ್ ಮತ್ತು ಗೈಡ್ಸ್‌ನ ಸಂಸ್ಥಾಪಕ ಲಾರ್ಡ್ ಬೈಡನ್ ಪೋವೆಲ್‌ರ ಜನ್ಮದಿನಾಚರಣೆ ಹಾಗೂ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ದೇವರಮಳ್ಳೂರಿನ ಭಗತ್‌ಸಿಂಗ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವೀರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಜನಾದೇವಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪರಿಸರ ಕುರಿತು  ಬೀದಿ ನಾಟಕ, ಸಾಂಸ್ಕೃತಿಕ ಹಾಗೂ ಜನಜಾಗೃತಿ ನಡೆಸಿದರು. ಅಂಜನಾ ದೇವಿ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಪ್ಟನ್ ಜನಶ್ರೀ, ದೇವರಮಳ್ಳೂರು ಶಾಲೆಯ ಮುಖ್ಯ ಶಿಕ್ಷಕ ಜಯನೇಂದ್ರಕುಮಾರ್, ಶಿಕ್ಷಕರಾದ ಶ್ರೀನಿವಾಸರೆಡ್ಡಿ, ಧನಕುಮಾರ್, ಮುರಳಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಂಜುಂಡಪ್ಪ, ಸದಸ್ಯರಾದ ಆನಂದ್, ಚಿಕ್ಕತಾಯಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಸಿ.ಎಂ.ಸೊಣ್ಣಪ್ಪ,  ಕೆ.ಎಸ್.ಕೆಂಪಣ್ಣ, ನಾರಾಯಣಪ್ಪ ಮತ್ತಿತರರು ಹಾಜರಿದ್ದರು.ಕೆಂಪೇಗೌಡ ಜಯಂತಿ: ಪೂರ್ವಭಾವಿ ಸಭೆಕೋಲಾರ: ಬೆಂಗಳೂರು ನಿರ್ಮಾತೃ ಕೆಂಪೇಗೌಡರ 500ನೇ ಜಯಂತಿಯನ್ನು ಜಿಲ್ಲಾದ್ಯಂತ ವೈಭವ, ಸಡಗರಗಳಿಂದ ಆಚರಿಸುವ ಸಲುವಾಗಿ ನಗರದ ಪತ್ರಕರ್ತರ ಭವನದಲ್ಲಿ ಫೆ.26ರಂದು ಬೆಳಿಗ್ಗೆ 10-30ಕ್ಕೆ ವಿವಿಧ ಒಕ್ಕಲಿಗ ಸಂಘಗಳ ಪೂರ್ವಭಾವಿ ಸಿದ್ಧತಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಒಕ್ಕಲಿಗರ ಸಂಘ ಹಾಗೂ ಕೆಂಪೇಗೌಡರ ಜಯಂತ್ಯುತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿವೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry