ಬುಧವಾರ, ಜೂಲೈ 8, 2020
26 °C

ವ್ಯಕ್ತಿಯನ್ನು ಅಡ್ಡಗಟ್ಟಿ ದರೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು (ಚಿತ್ರದುರ್ಗ ಜಿಲ್ಲೆ): ಗ್ಯಾರೇಜಿನಲ್ಲಿ ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಊರಿಗೆ ಮರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ, ಮೈಮೇಲೆ ಖಾರದ ಪುಡಿ ಎರಚಿ ನಗದು ಹಾಗೂ ಮೊಬೈಲ್ ದೋಚಿರುವ ಘಟನೆ  ತಾಲ್ಲೂಕಿನ ಗೌಡನಹಳ್ಳಿ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ನಡೆದಿದೆ.

ನಗರದ ಗ್ಯಾರೇಜೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುವ ಮಾದೇನಹಳ್ಳಿ ಮುಸ್ಲಿಂ ಕಾಲೊನಿಯ ಜಾಫರ್ (30) ಊರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ಗೌಡನಹಳ್ಳಿ ಅರಣ್ಯ ಪ್ರದೇಶದಲ್ಲಿ ನಾಲ್ವರು ಮುಸುಕುಧಾರಿಗಳು ಇದ್ದಕ್ಕಿದ್ದಂತೆ ಬೈಕಿಗೆ ಅಡ್ಡ ಬಂದು, ಖಾರದ ಪುಡಿಯನ್ನು ಮೈಮೇಲೆ ಎರಚಿ, ರೂ. 8500 ನಗದು ಹಾಗೂ ಮೊಬೈಲ್ ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಆರೋಪಿಗಳ ಸುಳಿವು ಇದುವರೆಗೂ ದೊರೆತಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.