ಮಂಗಳವಾರ, ಮೇ 18, 2021
24 °C

ವ್ಯಕ್ತಿ ಅನುಮಾನಾಸ್ಪದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜರಾಜೇಶ್ವರಿನಗರ ಸಮೀಪದ ಕೆಂಚೇನಹಳ್ಳಿಯಲ್ಲಿ ಚಂದ್ರಶೇಖರರಾವ್ (30) ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ಮೂಲತಃ ತುಮಕೂರು ಜಿಲ್ಲೆ ತಿಪಟೂರಿನ ಚಂದ್ರಶೇಖರರಾವ್, ಡಿಪ್ಲೊಮಾ ಓದಿದ್ದರು. ಒಂದು ವರ್ಷದಿಂದ ಕೆಂಚೇನಹಳ್ಳಿ ಐದನೇ ಮುಖ್ಯರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.ಸೋಮವಾರ (ಜೂ.10) ಸಂಜೆ ಕಚೇರಿಯಿಂದ ಮನೆಗೆ ಬಂದ ಅವರು ಕೊಠಡಿಯೊಂದರಲ್ಲಿ ಮಲಗಿದ್ದ ಜಾಗದಲ್ಲೇ ಮೃತಪಟ್ಟಿದ್ದಾರೆ. ಬುಧವಾರ ಅವರ ಮನೆಯ ಒಳ ಭಾಗದಿಂದ ಕೆಟ್ಟ ವಾಸನೆ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದರು. ಈ ಮಾಹಿತಿ ಆಧರಿಸಿ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವರು ಸಾವನ್ನಪ್ಪಿರುವುದು ಗೊತ್ತಾಯಿತು. ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಅವರ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಕಾರಣ ಏನೆಂದು ಗೊತ್ತಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ. ರಾಜರಾಜೇಶ್ವರಿನಗರ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.ವಿದ್ಯಾರ್ಥಿನಿ ಆತ್ಮಹತ್ಯೆ: ಸಿದ್ದಾಪುರ ಬಳಿಯ ವೆಂಕಟರೆಡ್ಡಿ ಲೇಔಟ್‌ನಲ್ಲಿ ಬುಧವಾರ ಮಧ್ಯಾಹ್ನ ಸಂಗೀತಾ (17) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂಗೀತಾ, ಜಯನಗರ 2ನೇ ಹಂತದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಕುಟುಂಬ ಸದಸ್ಯರೆಲ್ಲಾ ಹೊರಗೆ ಹೋಗಿದ್ದಾಗ ಆಕೆ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾಳೆ ಎಂದು ಸಿದ್ದಾಪುರ ಪೊಲೀಸರು ಹೇಳಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.