ಶನಿವಾರ, ಜೂನ್ 19, 2021
29 °C

ವ್ಯವಸ್ಥಿತ ಬರ ನಿರ್ವಹಣೆಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಐದು ತಾಲ್ಲೂಕುಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಬರ ನಿರ್ವಹಣಾ ಕಾರ್ಯ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಮದನಗೋಪಾಲ ಸಲಹೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಮತ್ತು  ಕೈಗೊಂಡ ಮುಂಜಾಗ್ರತಾ ಕ್ರಮ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಪರಿಶೀಲಿಸಿದ ಅವರು ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಕೈ ಬೋರ್ ಹಾಗೂ ಇತರ ಸೌಲಭ್ಯಗಳನ್ನು ಮಾಡಿಕೊಡಬೇಕು.

 

ಅಲ್ಲದೇ ಪೈಪ್‌ಲೈನ್‌ನಲ್ಲಿ ತೊಂದರೆ ಕಂಡುಬಂದಲ್ಲಿ ಹತ್ತಿರದಲ್ಲಿರುವ ಬೋರ್‌ವೆಲ್ ಮೂಲಕ ಸಾರ್ವಜನಿಕರಿಗೆ ನೀರು ಒದಗಿಸುವ ವ್ಯವಸ್ಥೆ ಮಾಡಬೇಕು ಎಂದರು.ತುರ್ತು ಪರಿಸ್ಥಿತಿ ಕಂಡುಬಂದಲ್ಲಿ ಟ್ಯಾಂಕರ್‌ಗಳ ವ್ಯವಸ್ಥೆಯನ್ನು ಮಾಡಬೇಕು.  ಅಲ್ಲದೇ ಸಮಯವನ್ನು ನಿಗದಿಪಡಿಸಿ ನಿಗದಿತ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿ ದರು.ಇದೇ ಸಂದರ್ಭದಲ್ಲಿ ಬರ ನಿರ್ವಹಣೆಗಾಗಿ ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಪಾಂಡು ರಂಗ ನಾಯಕ ಅವರು ಮಾತನಾಡಿ, ಈವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆ ಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಬರುವ  ಮಳೆಗಾಲದವರೆಗೆ ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಕೆಲಸ ಅರಿಸಿ ಬಂದವರಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಕಲ್ಪಿಸ ಲಾಗುತ್ತಿದೆ. ಜಿಲ್ಲೆಯ ಶಿರಹಟ್ಟಿ ಹಾಗೂ ಮುಂಡರಗಿ ತಾಂಡಾಗಳನ್ನು ಬಿಟ್ಟರೆ ಬೇರೆ ಕಡೆಗಳಲ್ಲಿ  ಗುಳೆ ಹೋಗುವ ಪ್ರಕರಣಗಳು ಕಂಡು ಬಂದಿಲ್ಲ ಎಂದರು.ಜಿಲ್ಲೆಯ 5 ಗೋಶಾಲೆಗಳಲ್ಲಿ ಸದ್ಯ 641 ಜಾನುವಾರುಗಳಿದ್ದು ಕುಡಿಯುವ ನೀರು ಹಾಗೂ ವೈದ್ಯಕೀಯ ಚಿಕಿತ್ಸೆ ಕಲ್ಪಿಸಲಾಗಿದೆ ಎಂದು ನಾಯಕ್‌ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರಣ್ಣ ತುರಮರಿ ಮಾತನಾಡಿ, ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಜಿಲ್ಲೆಯ ಒಟ್ಟು 58 ಗ್ರಾಮಗಳಲ್ಲಿ ನೀರಿನ ವ್ಯವಸ್ಥೆಯನ್ನು ಪರಿಹರಿಸ ಲಾಗಿದೆ ಎಂದರು.

 

ಐದು ತಾಲ್ಲೂಕುಗಳಲ್ಲಿ 60 ಬೋರವೆಲ್ ಗಳನ್ನು  ತೆರೆಯಲಾಗಿದೆ. 258 ಬೋರವೆಲ್‌ಗಳನ್ನು ಹೈಡ್ರೋ ಫೆಕ್ಚರಿಂಗ್ ಮಾಡಲಾಗಿದೆ. ಅದರಲ್ಲಿ 197 ಬೋರವೆಲ್ ಗಳು ಯಶಸ್ವಿ ಯಾಗಿವೆ. ಶೇ. 76 ರಷ್ಟು ಕಾರ್ಯ ಮಾಡಲಾಗಿದೆ ಎಂದರು.

 

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರವಿಕುಮಾರ ನಾಯಕ ಅವರು ಹೆಸ್ಕಾಂ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹೆಚ್ಚಿನ ದೂರುಗಳು ಬರುತ್ತಿದ್ದು ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸ್ಥಳಗಳಿಗೆ ಖುದ್ದಾಗಿ ಹೋಗಿ ಪರಿಶೀಲಿಸುವಂತೆ  ಸಭೆಯಲ್ಲಿ ತಿಳಿಸಿದರು.ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಟಿ. ರುದ್ರಗೌಡ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.