ಶನಿವಾರ, ಮೇ 8, 2021
26 °C

ವ್ಯವಸ್ಥೆಯನ್ನು ಜನರೇ ಬದಲಿಸಬೇಕು: ಪುಟ್ಟಣ್ಣಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ರಾಜಕಾರಣಿಗಳಲ್ಲಿ ಪ್ರಾಮಾಣಿಕತೆಯ ಕೊರತೆ ಇದೆ. ಸ್ವಾರ್ಥ ಮತ್ತು ಭ್ರಷ್ಟ ಜನರು ನಮ್ಮನ್ನು ಆಳುತ್ತಿದ್ದಾರೆ. ಇಂಥ ವ್ಯವಸ್ಥೆಯನ್ನು ಬದಲಿಸಲು ಜನರೇ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ರೈತ ಮುಖಂಡ ಕೆ.ಎಸ್. ಪುಟ್ಟಣ್ಣಯ್ಯ ಹೇಳಿದರು.ರೈತ ಸಭಾಂಗಣದಲ್ಲಿ ಶನಿವಾರ ನಡೆದ ರೈತ ಸಂಘದ ಅಧ್ಯಕ್ಷ ಚಾಮರಸ ಮಾಲಿ ಪಾಟೀಲ್, ಗೌರವ ಡಾಕ್ಟರೇಟ್ ಪುರಸ್ಕೃತ ಎಚ್.ಡಿ. ಚೌಡಯ್ಯ ಅವರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಚೌಡಯ್ಯ ಅವರ ಸೇವೆ ಮತ್ತು ಸಮಯ ಪ್ರಜ್ಞೆ ಶ್ಲಾಘಿಸಿದ ಅವರು, ಇಂಥವರು ವಿರಳವಾಗುತ್ತಿದ್ದಾರೆ. ಚೌಡಯ್ಯ ಅವರ ಸಮಯಪ್ರಜ್ಞೆಯನ್ನು ಎಲ್ಲರೂ ಪಾಲಿಸಿದರೆ ಸಮಾಜದಲ್ಲಿ ಬದಲಾವಣೆ ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.ಆರ್‌ಎಪಿಸಿಎಂಎಸ್ ಅಧ್ಯಕ್ಷ ಬಿ. ಚಂದ್ರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸತೀಶ್, ಬಿ. ಚಂದ್ರು, ಹಲ್ಲೇಗೆರೆ ಶಿವರಾಂ, ರೈತ ಸಂಘದ ಮುಖಂಡರಾದ ಪಚ್ಚೆ ನಂಜುಂಡಸ್ವಾಮಿ, ಚುಕ್ಕಿ ನಂಜುಂಡಸ್ವಾಮಿ, ಬಡಗಲಪುರ ನಾಗೇಂದ್ರ, ಬಸವರಾಜು, ಕೋಣಸಾಲೆ ನರಸರಾಜು, ಕೆ.ಎಸ್. ನಂಜುಂಡೇಗೌಡ ಇತರರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.