ಮಂಗಳವಾರ, ಏಪ್ರಿಲ್ 13, 2021
30 °C

ವ್ಯಾಟ್ ತಗ್ಗಿಸಲು ಎಫ್‌ಕೆಸಿಸಿಐ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರ ವಿವಿಧ ಸರಕುಗಳ ಮೇಲೆ ಶೇ 0.5ರಷ್ಟು ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಹೆಚ್ಚಿಸಿರುವುದನ್ನು ಪಾಪಸ್ ಪಡೆಯಬೇಕು ಎಂದು ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘ (ಎಫ್‌ಕೆಸಿಸಿಐ) ಆಗ್ರಹಿಸಿದೆ.ಬುಧವಾರ ಇಲ್ಲಿ `ಎಫ್‌ಕೆಸಿಸಿಐ~ ಅಧ್ಯಕ್ಷ ಕೆ. ಶಿವ ಷಣ್ಮುಗಂ ನೇತೃತ್ವದಲ್ಲಿ ವಾಣಿಜ್ಯೋದ್ಯಮಿಗಳ ನಿಯೋಗ ಮುಖ್ಯ ಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.`ವ್ಯಾಟ್~ ಹೆಚ್ಚಳದಿಂದ 1000 ಕೋಟಿಗಳಷ್ಟು ಹೆಚ್ಚುವರಿ ವರಮಾನ ಬರಲಿದೆ ಎನ್ನುವ ಅಂದಾಜು ತಪ್ಪು. ಇದರಿಂದ ಅಕ್ರಮ ವಹಿವಾಟು ಕಳ್ಳಸಾಗಾಣಿಕೆಗೆ ಅವಕಾಶ ಲಭಿಸುತ್ತದೆ. ವಾಣಿಜ್ಯ ವಹಿವಾಟು ಬೇರೆ ರಾಜ್ಯಗಳಿಗೆ ಸ್ಥಳಾಂತರಗೊಳ್ಳುವುದದಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟ ಎಂದು ನಿಯೋಗ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು~ ಎಂದು `ಎಫ್‌ಕೆಸಿಸಿಐ~ ಪ್ರಕಟಣೆ ತಿಳಿಸಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.