ಬುಧವಾರ, ಏಪ್ರಿಲ್ 14, 2021
24 °C

ವ್ಯಾಪಾರ ಮೋಸದ ಜಾಲವಾಗಿದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ವ್ಯಾಪಾರ ಎಂದರೆ ಲಾಭ ಎಂಬಂತಿದ್ದು ಈಗ ಮೋಸದ ಜಾಲ ಎಂದಾಗಿದೆ ಎಂದು ಜಿಲ್ಲಾಧಿ ಕಾರಿ ಕೆ.ಅಮರನಾರಾಯಣ ಅಭಿಪ್ರಾಯಪಟ್ಟರು. ನಗರದ ಜೆಎಸ್‌ಎಸ್ ಮಹಿಳಾ ಕಾಲೇಜು ಸೆಮಿನಾರ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಜಾಹಿರಾತು, ರಿಯಾಯಿತಿ, ಇತರ ಆಕರ್ಷಣೆ, ನಕಲಿ ವಸ್ತು, ಅಗ್ಗದ ಬೆಲೆ ವಸ್ತುಗಳ ಬಗ್ಗೆ ಗ್ರಾಹಕರು ಜಾಗರೂಕರಾಗಿರಬೇಕು. ಗ್ರಾಹಕ ಕಾನೂನುಗಳ ಬಗ್ಗೆ ತಿಳಿದುಕೊಂಡರೆ ಮೊಸ ಜಾಲಗಳನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು. ಗ್ರಾಹಕ ಹಿತರಕ್ಷಣಾ ವೇದಿಕೆಗಳು, ಸಂಬಂಧಿಸಿದ ಇಲಾಖೆಯವರು ಗ್ರಾಹಕರ ಹಕ್ಕುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.ಜಿಪಂ ಅಧ್ಯಕ್ಷೆ ಕೆ.ರಾಜೇಶ್ವರಿ ಮಾತನಾಡಿ ನಕಲಿ ವಸ್ತುಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿದರೆ ಉತ್ತಮ ವಸ್ತುಗಳು ದೊರೆಯುತ್ತದೆ ಎಂದು ತಿಳಿಸಿದರು. ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಸದಸ್ಯೆ ರೇಣುಕಾಂಬ ಮಾತನಾಡಿ ಅನ್ಯಾಯ ತಡೆಗಟ್ಟುವ ಬಗ್ಗೆ ಹೆಚ್ಚಿನ ನಾಗರಿಕರಿಗೆ ಮಾಹಿತಿ ಇಲ್ಲ ಹಾಗೂ ಜನರಲ್ಲಿ ಕಾನೂನು ಸದ್ಬಳಕೆ  ಜಾಗೃತಿ ಮೂಡಿಲ್ಲ ಎಂದರು.ಜೆಎಸ್‌ಎಸ್ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಪುಷ್ಪವತಿ, ಚೂಡಾ ಅಧ್ಯಕ್ಷ ಆರ್.ಸುಂದರ್, ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಸದಸ್ಯ ಯು.ಸಿ.ಶಿವರಾಮೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ  ಗ್ರಾಹಕರ ವ್ಯವಹಾರ ಇಲಾಖೆ ಉಪನಿರ್ದೇಶಕ ಡಾ.ಎಸ್.ಇ. ಮಹದೇವಪ್ಪ, ಪುಟ್ಟಸ್ವಾಮಿ, ಗಂಗಾಧರ್ ಇತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.