ಸೋಮವಾರ, ಮೇ 23, 2022
28 °C

ಶಂಕರ್ ಬಿದರಿ ಪ್ರಕರಣ: ಹೈಕೋರ್ಟ್ ಆದೇಶ ರದ್ದು ಮಾಡಿದ ಸುಪ್ರೀಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್ಎಸ್): ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಸ್ಥಾನಕ್ಕೆ ಶಂಕರ ಬಿದರಿ ಅವರು ಅರ್ಹರಲ್ಲ ಎಂದು  ಸೋಮವಾರ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಶುಕ್ರವಾರ ರದ್ದುಗೊಳಿಸಿತು.

ನ್ಯಾಯಮೂರ್ತಿಗಳಾದ ಕೆ.ಎಸ್.ರಾಧಾಕೃಷ್ನನ್ ಹಾಗೂ ಸಿ.ಕೆ.ಪ್ರಸಾದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ರಾಜ್ಯದ ನೂತನ ಪೊಲೀಸ್ ಮುಖ್ಯಸ್ಥರನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿದೆ.

ಹೈಕೋರ್ಟ್ ಪ್ರಸ್ತಾಪಿಸಿದ್ದ ನರಹಂತಕ ವೀರಪ್ಪನ್ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಬಲಾತ್ಕಾರ ಹಾಗೂ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಸದಾಶಿವ ಆಯೋಗದ ವರದಿ ಸೇರಿದಂತೆ ವಿಶೇಷ ಕಾರ್ಯಪಡೆಯ ಮುಖ್ಯಸ್ಥರಾಗಿದ್ದ ಶಂಕರ ಬಿದರಿ ಅವರ ಸೇವಾ ಅವಧಿಯಲ್ಲಿ ಅವರ ಮೇಲೆ ಯಾವುದೇ ರೀತಿಯಾದ ಆರೋಪಗಳು ಇರಲಿಲ್ಲ ಎಂದು ಸುಪ್ರೀಂ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.