ಶುಕ್ರವಾರ, ಮೇ 14, 2021
29 °C

ಶನಿವಾರ ಬ್ಯಾಂಕಿಂಗ್ ವಹಿವಾಟು ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಈ ವಾರ ಮೂರು ದಿನಗಳ ಕಾಲ ಬ್ಯಾಂಕಿಂಗ್ ವಹಿವಾಟು ನಡೆಯದ ಹಿನ್ನೆಯಲ್ಲಿ, ಶನಿವಾರ (ಏ. 7) ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ದಿನಪೂರ್ತಿ ವಹಿವಾಟು ನಡೆಸಲಿವೆ.



ಶನಿವಾರದಂದು ವಾಡಿಕೆಯ ಅರ್ಧ ದಿನ ಬದಲಿಗೆ, ಇತರ ದಿನಗಳಂತೆ ಪೂರ್ಣ ಪ್ರಮಾಣದಲ್ಲಿ ಬ್ಯಾಂಕಿಂಗ್ ವಹಿವಾಟು ನಡೆಸಬೇಕು ಎಂದು ಹಣಕಾಸು ಇಲಾಖೆಯು ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸೂಚಿಸಿದೆ.



ಸಾಮಾನ್ಯವಾಗಿ  ಶನಿವಾರ ಬ್ಯಾಂಕ್‌ಗಳು ಬೆಳಿಗ್ಗೆ 10ರಿಂದ 1 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸುತ್ತವೆ. ಸೋಮವಾರ ವಾರ್ಷಿಕ ಲೆಕ್ಕಪತ್ರ ತಪಾಸಣೆಗೆ, ಏ. 4ರಂದು ಮಹಾವೀರ ಜಯಂತಿಯ ರಜೆ ಕಾರಣಕ್ಕೆ ಬ್ಯಾಂಕ್‌ಗಳು ಕಾರ್ಯನಿರ್ವಹಿಸಿಲ್ಲ.  ಏ. 6ರಂದು ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.