ಶನಿವಾರ, ಜೂನ್ 12, 2021
23 °C

ಶಬಾನಾಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್ (ಪಿಟಿಐ): ಸಿನಿಮಾ ರಂಗಕ್ಕೆ ನೀಡಿರುವ ಕೊಡುಗೆ ಮತ್ತು ನ್ಯೂಯಾರ್ಕ್ ಚಿತ್ರೋದ್ಯಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದಕ್ಕೆ ಬಾಲಿವುಡ್ ಹಿರಿಯ ನಟಿ ಶಬಾನಾ ಅಜ್ಮಿ ಅವರಿಗೆ `ನ್ಯೂಯಾರ್ಕ್ ನಗರ~ ಪ್ರಶಸ್ತಿ   ನೀಡಿ ಗೌರವಿಸಲಾಗಿದೆ.   ಈ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆ ಅವರದು.

ಕಲಾ ಸಿನಿಮಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಮತ್ತು ಇಲ್ಲಿನ ಚಿತ್ರೋದ್ಯಮದಲ್ಲಿ ಕ್ರಿಯಾಶೀಲರಾಗಿ ಪಾಲ್ಗೊಂಡಿದ್ದಕ್ಕೆ ನ್ಯೂಯಾರ್ಕ್ ನಗರದ `ಘೋಷಣಾ ಪತ್ರ~ವನ್ನು ಶುಕ್ರವಾರ ಇಲ್ಲಿ ನಡೆದ ಸಮಾರಂಭದಲ್ಲಿ ಶಬಾನಾ ಅವರಿಗೆ ಪ್ರದಾನ ಮಾಡಲಾಯಿತು.ನ್ಯೂಯಾರ್ಕ್ ಚಲನಚಿತ್ರ ಮತ್ತು ಟಿ.ವಿ ಕಾರ್ಯಕ್ರಮ ಅಭಿವೃದ್ಧಿ ಕಾರ್ಯನಿರ್ವಾಹಕ ನಿರ್ದೇಶಕ ಪ್ಯಾಟ್ರಿಶಿಯಾ ಕಾಫ್‌ಮನ್, ನ್ಯೂಯಾರ್ಕ್ ಗವರ್ನರ್   ಆ್ಯಂಡ್ರೂ ಕ್ಯೂಮೊ, ಸಂಸದೆ    ಕೆರೊಲಿನ್ ಮಲೊನಿ ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.