ಮಂಗಳವಾರ, ಮೇ 18, 2021
22 °C

ಶಬ್ದಮಾಲಿನ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದರಿಂದಾಗಿ ರಸ್ತೆ ಬದಿಯಲ್ಲಿ ವಾಸಿಸುವ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಕೆಲ ವಾಹನಗಳ ಹಾರನ್‌ಗಳು ಕಿವಿಗೆ ಕರ್ಕಶವಾಗಿ ಕೇಳಿಸುವಂತೆ ಇರುತ್ತವೆ. ಇದರಿಂದ ಶಬ್ದಮಾಲಿನ್ಯ ಹೆಚ್ಚಾಗುತ್ತಿದೆ.ಪರಿಸರ ಸಚಿವರು ಕೇವಲ ಜಲಮಾಲಿನ್ಯ, ವಾಯುಮಾಲಿನ್ಯದ ಬಗ್ಗೆಯೇ ಹೆಚ್ಚು ಕಳವಳ ವ್ಯಕ್ತಪಡಿಸುತ್ತಾರೆ. ಶಬ್ದಮಾಲಿನ್ಯವೂ ಹೃದಯಸಂಬಂಧಿ ಕಾಯಿಲೆಗಳಿಗೆ ರಹದಾರಿ ಮಾಡಿಕೊಡುತ್ತದೆ ಎಂಬುದು ಅವರ ಗಮನದಲ್ಲಿ ಇರುವಂತೆ ಕಾಣುತ್ತಿಲ್ಲ.ಇನ್ನಾದರೂ ಈ ಸಂಬಂಧ ವಾಹನಗಳಿಗೆ ಹೆಚ್ಚು ಶಬ್ದ ಮಾಡದ ಹಾರನ್‌ಗಳನ್ನು ಅಳವಡಿಸಿಕೊಳ್ಳಲು ಸಾರಿಗೆ ಇಲಾಖೆ ಕ್ರಮ ಕೈಗೊಳ್ಳುತ್ತದೆಯೇ?

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.