ಶುಕ್ರವಾರ, ಮೇ 14, 2021
21 °C

ಶಮ್ಲಾ ಅಮಾನತಿಗೆ ಶಿಫಾರಸು: ನಿರ್ಧಾರ ಕೈಗೊಳ್ಳದ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಎಎಸ್ ಅಧಿಕಾರಿ ಶಮ್ಲಾ ಇಕ್ಬಾಲ್ ಅವರನ್ನು ಅಮಾನತು ಮಾಡಬೇಕು ಎಂದು ಲೋಕಾಯುಕ್ತ ಪೊಲೀಸರು ಸರ್ಕಾರಕ್ಕೆ ಶಿಫಾರಸು ಮಾಡಿ 3ವಾರಗಳು ಸಂದಿವೆ. ಆದರೆ ಈ ಕುರಿತು ಸರ್ಕಾರ ಇದುವರೆಗೂ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಲೋಕಾಯುಕ್ತ ದಾಳಿ ನಂತರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ, ಇದುವರೆಗೂ ಆ ಬಗ್ಗೆ ಸರ್ಕಾರ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ ಎನ್ನಲಾಗಿದೆ.ಸಮಗ್ರ ಶಿಶು ಕಲ್ಯಾಣ ಯೋಜನೆಯ (ಐಸಿಡಿಎಸ್) ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತು ತನಿಖೆ ಆರಂಭವಾದ ದಿನದಿಂದಲೂ ಶಮ್ಲಾ ಅವರ ಮೇಲೆ ಲೋಕಾಯುಕ್ತ ಪೊಲೀಸರು ಕಣ್ಣಿಟ್ಟಿದ್ದಾರೆ. ಐಸಿಡಿಎಸ್ ಹಗರಣದಲ್ಲಿ ಶಾಮೀಲಾಗಿದ್ದಾರೆ ಎನ್ನುವ ಆರೋಪ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪ ಕುರಿತು ಒಟ್ಟು ಎರಡು ಪ್ರಕರಣಗಳು ಶಮ್ಲಾ ವಿರುದ್ಧ ದಾಖಲಾಗಿವೆ.ಈ ಕುರಿತು ಪ್ರತಿಕ್ರಿಯೆ ನೀಡಿದ ಹಿರಿಯ ಅಧಿಕಾರಿಯೊಬ್ಬರು, ಶಮ್ಲಾ ಅವರ ಅಮಾನತು ಸಂಬಂಧ ಬುಧವಾರದೊಳಗೆ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.