ಶರಣರ ವಿಚಾರ ಎಂದಿಗೂ ಪ್ರಸ್ತುತ

7

ಶರಣರ ವಿಚಾರ ಎಂದಿಗೂ ಪ್ರಸ್ತುತ

Published:
Updated:

ಹಾವೇರಿ: ಹನ್ನೆರಡನೇ ಶತಮಾನದ ಶರಣರ ವಿಚಾರಧಾರೆಗಳು ಇಂದಿಗೂ, ಎಂದೆಂದಿಗೂ ಪ್ರಸ್ತುತವಾಗಿದ್ದು, ಅವರ ವಿಚಾರಗಳನ್ನು ಅನುಷ್ಠಾನಕ್ಕೆ ತಂದರೆ ಸಮಾಜದಲ್ಲಿ ಅಶಾಂತಿ ಎಂಬುದು ಇರುವುದಿಲ್ಲ ಎಂದು ಲೋಕಸಭೆ ಸದಸ್ಯ ಶಿವಕುಮಾರ ಉದಾಸಿ ಹೇಳಿದರು.ನಗರದ ಹೊಸಮಠ ಕಾಲೇಜು ಆವರಣದಲ್ಲಿ ಮಂಗಳವಾರ ಆರಂಭಗೊಂಡ ಶರಣ ಸಂಸ್ಕೃತಿ ಮೇಳದ ಅಂಗವಾಗಿ ಏರ್ಪಡಿಸಿದ್ದ ನಾಟಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.ಶರಣರ ಹಾದಿಯಲ್ಲಿ ಚಿತ್ರದುರ್ಗದ ಮುರುಘಾ ಶರಣರು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕಸಾಪ ಜಿಲ್ಲಾಧ್ಯಕ್ಷ ಮಾರುತಿ ಶಿಡ್ಲಾಪುರ ಮಾತನಾಡಿ, ಶರಣರ ಸಂದೇಶಗಳನ್ನು ಇಂದಿನ ಯುವ ಜನರಿಗೆ ಮನಮುಟ್ಟುವಂತೆ ತಿಳಿಸಿಕೊಡಬೇಕಾದ ಅಗತ್ಯವಿದೆ ಎಂದರು.ಅಗಡಿ ಸಂಗನಬಸವ ಶ್ರೀಗಳು ಅಧ್ಯಕ್ಷತೆ ವಹಿಸಿದ್ದರು. ಕರ್ಜಗಿ ಗೌರಿಮಠದ ಶಿವಯೋಗಿ ಶಿವಾಚಾರ್ಯರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದ ಸಾನ್ನಿಧ್ಯವನ್ನು ಹೊಸಮಠದ ಬಸವಶಾಂತ ಶ್ರೀಗಳು ವಹಿಸಿದ್ದರು.ಧಾರವಾಡ ಕೆಎಂಎಫ್ ಅಧ್ಯಕ್ಷ ಹಾಗೂ ಉತ್ಸವ ಸಮಿತಿ ಅಧ್ಯಕ್ಷ ಬಸವರಾಜ ಅರಬಗೊಂಡ, ಹೆಚ್ಚುವರಿ ಎಸ್ಪಿ ಎಂ.ಎಂ. ಅಗಡಿ, ಪ್ರಾಚಾರ್ಯ ಬೇವಿನಮರದ ಮತ್ತಿತರರು ಹಾಜರಿದ್ದರು. ಪರಮೇಶಪ್ಪ ಮೇಗಳಮನಿ ಸ್ವಾಗತಿಸಿದರು. ರಾಜೇಂದ್ರ ಸಜ್ಜನರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷ್ಣಾ ಜವಳಿ ಕಾರ್ಯಕ್ರಮ ನಿರೂಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry