ಗುರುವಾರ , ಆಗಸ್ಟ್ 5, 2021
23 °C

ಶರತ್ ಗಾಯಕ್‌ವಾಡ್‌ಗೆ ಮೂರು ಪದಕದ ಗೌರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕರ್ನಾಟಕದ ಶರತ್ ಗಾಯಕ್‌ವಾಡ್ ಜರ್ಮನಿಯ ಬರ್ಲಿನ್‌ನಲ್ಲಿ ನಡೆದ ಅಂಗವಿಕಲರ ಅಂತರರಾಷ್ಟ್ರೀಯ ಈಜು ಚಾಂಪಿಯನ್‌ಷಿಪ್‌ನಲ್ಲಿ ಮೂರು ಪದಕ ಜಯಿಸಿದ್ದಾರೆ. ಅದರಲ್ಲಿ ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳು ಸೇರಿವೆ.200 ಮೀಟರ್ ವೈಯಕ್ತಿಕ ಮೆಡ್ಲೆಯಲ್ಲಿ ಬೆಳ್ಳಿ ಹಾಗೂ 50 ಮೀ.ಫ್ರೀಸ್ಟೈಲ್ ಮತ್ತು ಬಟರ್‌ಫ್ಲೈನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.‘ದೇಶಕ್ಕಾಗಿ ಪದಕ ಗೆದ್ದಿರುವುದು ಖುಷಿ ತಂದಿದೆ. ನನ್ನ ಪ್ರದರ್ಶನದಲ್ಲೂ ಸುಧಾರಣೆ ಕಂಡಿದೆ’ ಎಂದು ಬೆಂಗಳೂರಿನ ಶರತ್ ಪ್ರತಿಕ್ರಿಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.