ಶುಕ್ರವಾರ, ನವೆಂಬರ್ 15, 2019
21 °C

ಶರದ್‌ಗೆ ಮೂರನೇ ಬಾರಿಗೆ ಜೆಡಿಯು ಅಧ್ಯಕ್ಷ ಸ್ಥಾನ ಸಂಭವ

Published:
Updated:

ನವದೆಹಲಿ (ಪಿಟಿಐ): ಶರದ್ ಯಾದವ್ ಮೂರನೇ ಬಾರಿಗೆ ಸಂಯುಕ್ತ ಜನತಾದಳ (ಜೆಡಿಯು)ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.ಮುಂದಿನ ವರ್ಷ (2014) ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯು ಪಕ್ಷದ ಸಂಸದೀಯ ಮಂಡಳಿಯ ಸದಸ್ಯರು ಶರದ್ ಯಾದವ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಂಭವ ಇದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.ಏ.14ರಂದು ನಡೆಯಲಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಚುನಾವಣೆಗೆ ಶರದ್ ಯಾದವ್  ನಾಮಪತ್ರ ಸಲ್ಲಿಸಿರುವ ಏಕೈಕ ಅಭ್ಯರ್ಥಿಯಾಗಿದ್ದು, ಈ ಬಾರಿ ಕೂಡ ಯಾದವ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದ್ದು, ಶರದ್ ಯಾದವ್, ಪಕ್ಷದ ಹಿರಿಯ ಮುಖಂಡರೊಂದಿಗೆ ಪಕ್ಷದ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿ ಇವರಾಗಿದ್ದಾರೆ.

ನಾಮಪತ್ರ ವಾಪಸ್ಸು ಪಡೆಯಲು ಏ. 13 ಕೊನೆಯ ದಿನವಾಗಿದೆ. ಶರದ್ ಯಾದವ್ ಈಗಾಗಲೇ ಎರಡು ಬಾರಿ ಜೆಡಿಯು ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಪ್ರತಿಕ್ರಿಯಿಸಿ (+)