ಭಾನುವಾರ, ಜನವರಿ 26, 2020
29 °C

ಶರದ್‌ ಪವಾರ್‌ ನಿರಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಮುಂಬೈ ಕ್ರಿಕೆಟ್‌ ಸಂಸ್ಥೆ (ಎಂಸಿಎ) ಅಧ್ಯಕ್ಷರಾಗಿ ಕಾರ್ಯ  ನಿರ್ವಹಿಸದಂತೆ ಸ್ಥಳೀಯ ನ್ಯಾಯಾಲಯವು ಶರದ್‌ ಪವಾರ್‌ಗೆ ನೀಡಿದ್ದ ನಿರ್ದೇಶನಕ್ಕೆ ಬಾಂಬೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.ಪವಾರ್‌ ಎಂಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಬಿಜೆಪಿ ನಾಯಕ ಗೋಪಿನಾಥ್‌ ಮುಂಡೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯ ನ. 26 ರಂದು  ನೀಡಿದ ತೀರ್ಪಿನಲ್ಲಿ ಪವಾರ್‌ಗೆ ಎಂಸಿಎ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸದಂತೆ ಸೂಚಿಸಿತ್ತು.

ಪವಾರ್‌ ಈ ತೀರ್ಪನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ ಮೊರೆ ಹೋಗಿದ್ದರು.

ಸೋಮವಾರ ತೀರ್ಪು ನೀಡಿದ ನ್ಯಾಯಮೂರ್ತಿ ಮೊಹ್ತಾ, ಸ್ಥಳೀಯ ನ್ಯಾಯಾಲಯ ನೀಡಿದ ತೀರ್ಪಿಗೆ ಡಿಸೆಂಬರ್‌ 17ರ ವರೆಗೆ ತಡೆಯಾಜ್ಞೆ ವಿಧಿಸಿದ್ದಾರೆ. ಮಾತ್ರವಲ್ಲ, ಪವಾರ್‌ ಮೇಲ್ಮನವಿಯ ವಿಚಾರಣೆಯನ್ನು ಡಿ. 13 ರಂದು ನಡೆಸುವುದಾಗಿ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)