ಗುರುವಾರ , ಮೇ 6, 2021
31 °C

ಶಾಂತಾರಾಂ ಸಾಹಿತ್ಯ ಪ್ರಶಸ್ತಿಗೆ ಪುಸ್ತಕ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಂದಾಪುರ: ಡಾ.ಎಚ್.ಶಾಂತಾರಾಂ ಸಾಹಿತ್ಯ ಪ್ರಶಸ್ತಿಗೆ ಲೇಖಕರು ಮತ್ತು ಪ್ರಕಾಶಕರಿಂದ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯ ಮೊತ್ತ ಹದಿನೈದು ಸಾವಿರ ರೂ.  ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ.

ಈ ಪ್ರಶಸ್ತಿಗೆ 2010ರಲ್ಲಿ ಪ್ರಕಟಗೊಂಡ ಕೃತಿಗಳನ್ನು ಮಾತ್ರ ಪರಿಗಣಿಸಲಾಗುವುದು.  ಪ್ರಶಸ್ತಿಗೆ ಅನುವಾದ, ರೂಪಾಂತರ, ಭಾಷಾಂತರ, ಸಾರಸಂಗ್ರಹ, ಸಮಗ್ರ ಸಂಪುಟಗಳನ್ನು ಪರಿಗಣಿಸಲಾಗುವುದಿಲ್ಲ.  ಸಾಹಿತ್ಯ ಕೃತಿಗಳ ತಲಾ ನಾಲ್ಕು ಪ್ರತಿಗಳನ್ನು ಏಪ್ರಿಲ್ 25ರೊಳಗೆ ಡಾ.ಎಚ್.ಶಾಂತಾರಾಂ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕರ್ಸ್ ಕಾಲೇಜು ಆವರಣ, ಕುಂದಾಪುರ-576201 ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ.(08254)-230369 ಅಥವಾ 9449257263 ಸಂಪರ್ಕಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.