ಗುರುವಾರ , ಮೇ 6, 2021
23 °C

ಶಾಂತಿ,ನೆಮ್ಮದಿಯೇ ನೈಜ ಸಂಪತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಭಗವಂತನ ಸೇವೆಯಿಂದ ಮಾನಸಿಕ ಶಾಂತಿ, ನೆಮ್ಮದಿ ಲಭಿಸುವ ಜತೆಗೆ ಬದುಕಿನಲ್ಲಿ ಸುಖ, ಸಂತೋಷ ದೊರೆಯುತ್ತದೆ ಎಂದು ನಗರಸಭೆ ಅಧ್ಯಕ್ಷ ಸಿ.ಆರ್.ಪ್ರೇಮ್‌ಕುಮಾರ್ ಹೇಳಿದರು.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಜಯಪುರ ಬಡಾವಣೆ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ನಗರದ ಕಾಮ ಧೇನು ಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ಅಂಗವಾಗಿ ಏರ್ಪಡಿಸಿದ್ದ ಧಾರ್ಮಿಕ ಸಭೆ ಉದ್ಘಾಟಿಸಿ ಅವರು ಮಾತ ನಾಡಿದರು.ಧಾರ್ಮಿಕ ಆಚರಣೆಯಲ್ಲಿ ತೊಡಗಿ ಭಗವಂತನಿಗೆ ಶರಣಾಗುವುದರಿಂದ ಮಾತ್ರ ಮನುಷ್ಯನ ಮನಸ್ಸು ಒತ್ತಡಗಳಿಂದ ಬಿಡುಗಡೆ ಹೊಂದಿ ಶಾಂತಿ ಮತ್ತು ಸಮಾಧಾನದ ಸ್ಥಿತಿಗೆ ಬರುತ್ತದೆ ಎಂದು ತಿಳಿಸಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಜಯರಾಂ ನೆಲ್ಲಿತ್ತಾಯ ಮಾತನಾಡಿ, ಮನೆಗೆ ಸುಖ, ಶಾಂತಿ ಮತ್ತು ನೆಮ್ಮದಿಯೇ ನಿಜವಾದ ಸಂಪತ್ತು. ಅದು ಲಭಿಸಬೇಕಾದರೆ ಸಂಸಾರದ ಪ್ರತಿ ಯೊಬ್ಬ ಸದಸ್ಯರೂ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ಕ್ಷೇತ್ರದ ಧರ್ಮಾಧಿಕಾರಿ ಎಂ.ಎಸ್.ನಂಜುಂಡಸ್ವಾಮಿ ಆರಂಭಿಸಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಇಲ್ಲಿಗೇ ಕೈಬಿಡದೇ ದೇವಾಲಯದಲ್ಲಿ ಪ್ರತಿವರ್ಷ ನಡೆಸಬೇಕು ಎಂದು ಸಲಹೆ ನೀಡಿದರು. ಸಮಾರಂಭಕ್ಕೆ ಮುನ್ನ ವಿಜಯಪುರ ಬಡಾವಣೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಮಹಿಳೆಯರಿಂದ ಸಾಮೂಹಿಕ ಸತ್ಯನಾರಾಯಣಪೂಜೆ ನಡೆಯಿತು. ಕಾರ್ಯಕ್ರಮದ ನಂತರ ಸಾರ್ವಜನಿಕ ಅನ್ನ ಸಂತರ್ಪಣೆ ಜರುಗಿತು. ಕಸ್ತೂರಿ ಬಾ ಸದನದ ಕಾರ್ಯದರ್ಶಿ ಮೋಹಿನಿ ಸಿದ್ದೇಗೌಡ, ನಗರಸಭೆ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಎಸ್.ಪವಾರ್, ವಾಣಿ ಚಂದ್ರಯ್ಯನಾಯ್ಡು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.