ಸೋಮವಾರ, ಡಿಸೆಂಬರ್ 16, 2019
17 °C

`ಶಾಂತಿಯುತ ಚುನಾವಣೆಗೆ ಸಿದ್ಧತೆ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೊಮ್ಮನಹಳ್ಳಿ: ವಿಧಾನಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜನ್ನಪ್ಪ ತಿಳಿಸಿದ್ದಾರೆ.ಕ್ಷೇತ್ರದಲ್ಲಿ 295 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಇವುಗಳಲ್ಲಿ 84 ಸೂಕ್ಷ್ಮ ಹಾಗೂ 81 ಅತಿ ಸೂಕ್ಷ್ಮ ಮತಗಟ್ಟೆಗಳು ಸೇರಿವೆ. ವಿವಿಧ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ 11 ತಂಡಗಳನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಕ್ಷೇತ್ರದಲ್ಲಿ 1,55,049 ಪುರುಷ ಮತದಾರರು ಹಾಗೂ 1,30,887 ಮಹಿಳಾ ಮತದಾರರು ಸೇರಿದಂತೆ ಒಟ್ಟು 2,82,936 ಮತದಾರರಿದ್ದಾರೆ. ಮತಪಟ್ಟಿಗೆ ಸೇರ್ಪಡೆಯಾಗಲು 20 ಸಾವಿರಕ್ಕೂ ಹೆಚ್ಚಿನ ಮಂದಿ ಅರ್ಜಿ ಸಲ್ಲಿಸಿದ್ದು ಅರ್ಜಿಗಳ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ. ಇದೇ 23 ರಂದು ಮತದಾರರ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)