ಶಾಂತಿ ಕದಡುವ ಯತ್ನ: ಕಳವಳ

7

ಶಾಂತಿ ಕದಡುವ ಯತ್ನ: ಕಳವಳ

Published:
Updated:

ಕೃಷ್ಣರಾಜಪುರ: ‘ಸಮಾಜದ ಆರೋಗ್ಯಕರ ಬೆಳವಣಿಗೆಯಲ್ಲಿ ಶಾಂತಿ ಕದಡುವ ಘಟನೆಗಳು ನಡೆಯುತ್ತಿವೆ. ಶೋಷಿತರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಸಮಾಜದ ಸ್ವಾಸ್ಥ್ಯ ರಕ್ಷಣೆಯಲ್ಲಿ ದಲಿತ ಸಂಘರ್ಷ ಸೇನೆ ಕಾನೂನಿನ ಚೌಕಟ್ಟಿನೊಳಗೆ ಹೋರಾಟ ನಡೆಸುತ್ತಿದೆ’ ಎಂದು ರಾಜ್ಯ ಘಟಕದ ಅಧ್ಯಕ್ಷ ಜಿ.ಆನಂದ ಹೇಳಿದರು.ಕೃಷ್ಣರಾಜಪುರ ವಿಧಾನಸಭಾ ಕ್ಷೇತ್ರ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘ಜನಾಂಗದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಇದಕ್ಕೆ ಪೋಷಕರ ಸಹಕಾರವೂ ಅಗತ್ಯ. ಸಮಾಜ ತಿದ್ದುವ ಕೆಲಸದಲ್ಲಿ ವಿದ್ಯಾವಂತ ಯುವಕರು ಭಾಗಿಗಳಾಗಬೇಕು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry