ಗುರುವಾರ , ಮೇ 19, 2022
21 °C

ಶಾಂತಿ ಮಾತುಕತೆ ಪಾಕ್ ಉತ್ಸುಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಭಾರತದೊಂದಿಗಿನ  ಶಾಂತಿ ಮಾತುಕತೆಗೆ ಮತ್ತೆ ಚಾಲನೆ ನೀಡಲು ಉತ್ಸುಕವಾಗಿರುವುದಾಗಿ ಪಾಕಿಸ್ತಾನ ಹೇಳಿದೆ.ಈ ಸಂಬಂಧ ನೂತನ ಪ್ರಧಾನಿ ನವಾಜ್ ಷರೀಫ್ ಅವರು ಮಾಜಿ ರಾಜತಾಂತ್ರಿಕ ಶಹ್ರಾರ್ ಖಾನ್ ಅವರನ್ನು ನೇಮಿಸಿದ್ದಾಗಿ ವಿದೇಶಾಂಗ ಕಚೇರಿ ವಕ್ತಾರ ಐಜಾಜ್ ಚೌಧರಿ ಸುದ್ದಿಗಾರರಿಗೆ ತಿಳಿಸಿದರು.ಮುಂದಿನ ಸುತ್ತಿನ ಮಾತುಕತೆಯ ದಿನಾಂಕ ನಿಗದಿ ಬಗ್ಗೆ ಎರಡೂ ಕಡೆಯ ಅಧಿಕಾರಿಗಳು ಸಮಾಲೋಚನೆ ನಡೆಸುತ್ತಿದ್ದಾರೆ. ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಮಹಾ ಅಧಿವೇಶನದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನವಾಜ್ ಷರೀಫ್ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.