ಬುಧವಾರ, ಜೂಲೈ 8, 2020
21 °C

ಶಾಂತಿ ಸಭೆಯಲ್ಲಿ ಮಾಮೂಲಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಂತಿ ಸಭೆಯಲ್ಲಿ ಮಾಮೂಲಿ ಆರೋಪ

ಚಿಕ್ಕಮಗಳೂರು: ‘ನಾವು ನಗರಸಭೆಯಿಂದ ಗೋಹತ್ಯಾ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದು ನೀಡಿದ್ದರೂ ಪೊಲೀಸರು ಕ್ರಮ ವಹಿಸುವುದಿಲ್ಲ. ರಕ್ಷಣೆ ಕೊಡಿ ಎಂದರೆ ಮೀನಾಮೇಷ ಎಣಿಸುತ್ತಾರೆ. ಗೋಮಾಂಸ ವ್ಯಾಪಾರಿಗಳು ‘ಮಾಮೂಲಿ’ ಕೊಡುತ್ತೇವೆ ಎಂದು ರಾಜಾರೋಷವಾಗಿ ವ್ಯಾಪಾರ ಮಾಡುತ್ತಿದ್ದಾರೆ’...-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ನಗರಸಭೆ ಸದಸ್ಯ ಮತ್ತು ಬಿಜೆಪಿ ಮುಖಂಡ ಪ್ರೇಮ್ ಕುಮಾರ್ ನಗರ ಪೊಲೀಸ್ ಠಾಣೆಯ ಅಧಿಕಾರಿಗಳ ಮೇಲೆ ಹರಿಹಾಯ್ದ ರೀತಿ ಇದು.‘ನಾವು ದೂರು ನೀಡಿದಾಗಲೇ ಪೊಲೀಸರು ಕಾರ್ಯಪ್ರವೃತ್ತರಾಗಿದ್ದರೆ ಕ್ರಮ ಕಸಾಯಿಖಾನೆಗಳೇ ಇರುತ್ತಿರಲಿಲ್ಲ. ಬಜರಂಗ ದಳ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳುವ ಪರಿಸ್ಥಿತಿಯೂ ನಿರ್ಮಾಣವಾಗುತ್ತಿರಲಿಲ್ಲ’ ಎಂದು ಪ್ರತಿಪಾದಿಸಿದರು.‘ಪೊಲೀಸರು ಸ್ಪಂದಿಸಿಲ್ಲವೆಂದು ಕಾನೂನು ಕೈಗೆತ್ತಿಕೊಳ್ಳುವುದನ್ನು ಸಹಿಸಲು ಸಾಧ್ಯವಿಲ್ಲ. ಸ್ಥಳೀಯ ಅಧಿಕಾರಿಗಳು ದೂರು ಸ್ವೀಕರಿಸಲು ನಿರಾಕರಿಸಿದರೆ ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಥವಾ ನನಗೇ ಮಾಹಿತಿ ನೀಡಿ’ ಎಂದು ಜಿಲ್ಲಾಧಿಕಾರಿ ಚನ್ನಪ್ಪಗೌಡ ಹೇಳಿದರು.ಎರಡೂ ಸಮುದಾಯದ ಗಣ್ಯರನ್ನೊಳಗೊಂಡ ತಂಡ ರಚಿಸಿ ಅಕ್ರಮ ಮಾಂಸದಂಗಡಿಗಳ ವಿರುದ್ಧ ಕಾರ್ಯಾಚಾರಣೆ ನಡೆಸಲಾಗುವುದು’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.