ಶುಕ್ರವಾರ, ಜೂಲೈ 10, 2020
27 °C

ಶಾರೀರಿಕ ನೆಮ್ಮದಿಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ನಿರ್ವಹಿಸಲು ಮತ್ತು ಮಾನಸಿಕ ಹಾಗೂ ಶಾರೀರಿಕ ನೆಮ್ಮದಿಗಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅಗತ್ಯ ಎಂದು ತಹಶೀಲ್ದಾರ್ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.ತಾಲ್ಲೂಕು ಸರ್ಕಾರಿ ನೌಕರರ ಸಂಘವು ನಗರದ ಝಾನ್ಸಿ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ಈಚೆಗಂತೂ ಸರ್ಕಾರಿ ನೌಕರರು ಹಲವು ರೀತಿಯ ಒತ್ತಡಗಳಲ್ಲಿ ಕೆಲಸ ನಿರ್ವಹಿಸಬೇಕಾಗಿದೆ. ಒತ್ತಡಗಳಿಂದ ಮಾನಸಿಕ ನೆಮ್ಮದಿ ಕೆಡಿಸುವ ಜತೆ ದೈಹಿಕವಾಗಿಯೂ ತೊಂದರೆಗೆ ಒಳಗಾಗಬೇಕಾಗುತ್ತದೆ. ಒತ್ತಡ ತಡೆದುಕೊಂಡು ದೈಹಿಕ ಮತ್ತು ಮಾನಸಿಕವಾಗಿ ಬೆಳವಣಿಗೆಯಾಗಲು ಕ್ರೀಡಾಚಟುವಟಿಕೆಗಳು ಎಲ್ಲ ವಯಸ್ಸಿನವರಿಗೂ ಅತ್ಯಗತ್ಯವಾಗಿವೆ ಎಂದರು.ಕ್ರೀಡೆಗಳು ವಿದ್ಯಾಭ್ಯಾಸದ ಒಂದು ಅಂಗವಾಗಿವೆ, ನೌಕರರ ವಯಸ್ಸಿಗೆ ಅನುಗುಣವಾದ ಕ್ರೀಡೆಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತಹ ಅವಕಾಶಗಳನ್ನು ನೌಕರರ ಸಂಘವು ಕಲ್ಪಿಸಿಕೊಡಬೇಕು. ನೌಕರರು ಉತ್ತಮವಾಗಿ ಕೆಲಸ ನಿರ್ವಹಿಸಬೇಕಾದರೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಪ್ರಪುಲ್ಲಿತರಾಗಿರಬೇಕು. ನೌಕರರ ಕ್ರೀಡಾ ಚಟುವಟಿಕೆಗಳಿಗೆ ಎಲ್ಲ ರೀತಿಯ ಪ್ರೋತ್ಸಾಹ ನೀಡುವುದಾಗಿ ಭರವಸೆ ನೀಡಿದರು.ಡಿವೈಎಸ್ಪಿ ಆನಂದ್ ಮಾತನಾಡಿ, ಕ್ರೀಕೂಟಗಳಲ್ಲಿ ಭಾಗವಹಿಸುವುದರಿಂದ  ವಿಚಾರ ವಿನಿಮಯ, ಜ್ಞಾನ, ವಿಷಯ ಸಂಗ್ರಹಣೆಗೂ ಅನುಕೂಲವಾಗುತ್ತದೆ.ಇಂತಹ ಅವಕಾಶ ಕಳೆದುಕೊಳ್ಳದೆ ಪ್ರತಿಯೊಬ್ಬ ನೌಕರರು ಭಾಗವಹಿಸಬೇಕು ಎಂದರು.ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆಂಪಣ್ಣ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಲ್.ಶ್ರೀನಿವಾಸ್ ಮಾತನಾಡಿದರು.ಸರ್ಕಾರಿ ನೌಕರರ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ನಾರಾಯಣರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.ತಾಲ್ಲೂಕು ಪಂಚಾಯಿತಿ ಇಒ ರಂಗನಾಥಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟರಾಮರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಸಂತರೆಡ್ಡಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ನಾಗೇಂದ್ರಬಾಬು, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಕಾಳಪ್ಪ, ಡಾ.ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.