ಶಾರೀರಿಕ ನೆಮ್ಮದಿಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಿ ver 112

7

ಶಾರೀರಿಕ ನೆಮ್ಮದಿಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಿ ver 112

Published:
Updated:

ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ ನಿರ್ವಹಿಸಲು ಮತ್ತು ಮಾನಸಿಕ ಹಾಗೂ ಶಾರೀರಿಕ ನೆಮ್ಮದಿಗಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅಗತ್ಯ ಎಂದು ತಹಶೀಲ್ದಾರ್ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.ತಾಲ್ಲೂಕು ಸರ್ಕಾರಿ ನೌಕರರ ಸಂಘವು ನಗರದ ಝಾನ್ಸಿ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ಈಚೆಗಂತೂ ಸರ್ಕಾರಿ ನೌಕರರು ಹಲವು ರೀತಿಯ ಒತ್ತಡಗಳಲ್ಲಿ ಕೆಲಸ ನಿರ್ವಹಿಸಬೇಕಾಗಿದೆ. ಒತ್ತಡಗಳಿಂದ ಮಾನಸಿಕ ನೆಮ್ಮದಿ ಕೆಡಿಸುವ ಜತೆ ದೈಹಿಕವಾಗಿಯೂ ತೊಂದರೆಗೆ ಒಳಗಾಗಬೇಕಾಗುತ್ತದೆ.ಒತ್ತಡ ತಡೆದುಕೊಂಡು ದೈಹಿಕ ಮತ್ತು ಮಾನಸಿಕವಾಗಿ ಬೆಳವಣಿಗೆಯಾಗಲು ಕ್ರೀಡಾಚಟುವಟಿಕೆಗಳು ಎಲ್ಲ ವಯಸ್ಸಿನವರಿಗೂ ಅತ್ಯಗತ್ಯವಾಗಿವೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry