ಶಾರುಖ್, ಸಲ್ಮಾನ್ ವಿರುದ್ಧ ಕ್ರಮದ ವರದಿ ಸಲ್ಲಿಸಲು ಕೋರ್ಟ್ ಸೂಚನೆ

ನವದೆಹಲಿ (ಪಿಟಿಐ): ಬಾಲಿವುಡ್ ನಟರಾದ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರು ರಿಯಾಲಿಟಿ ಷೋ ಒಂದರಲ್ಲಿ ಪಾದರಕ್ಷೆಗಳನ್ನು ಹಾಕಿಕೊಂಡು ದೇವಸ್ಥಾನ ಪ್ರವೇಶಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಕ್ರಿಮಿನಲ್ ದೂರಿನ ಬಗ್ಗೆ ತೆಗೆದುಕೊಂಡ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ದೆಹಲಿ ಪೊಲೀಸರಿಗೆ ಸೂಚಿಸಿದೆ.
ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವಿ.ಕೆ. ಗೌತಮ್ ಅವರು ಫೆಬ್ರುವರಿ 12ರಂದು ವರದಿ ಸಲ್ಲಿಸಲು ರೂಪ್ನಗರ ಪೊಲೀಸ್ ಠಾಣೆಯ ಮೇಲ್ವಿಚಾರಣಾ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ಕಲರ್ಸ್ ವಾಹಿನಿ ರಿಯಾಲಿಟಿ ಷೋ ಚಿತ್ರೀಕರಣದ ವೇಳೆ ನಟರಾದ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಪಾದರಕ್ಷೆಗಳನ್ನು ಧರಿಸಿ ದೇವಾಲಯ ಪ್ರವೇಶಿಸಿದ್ದಲ್ಲದೆ, ತಮ್ಮ ಹಿಂಭಾಗವನ್ನು ಕಾಳಿ ದೇವತೆಗೆ ತೋರಿಸುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಚ್ಯುತಿ ತಂದಿದ್ದರು ಎಂದು ವಕೀಲ ಗೌರವ್ ಗುಲತಿ ದೂರು ದಾಖಲಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.