ಬುಧವಾರ, ಜೂನ್ 16, 2021
27 °C

ಶಾಲಾಭಿವೃದ್ಧಿ ಸಮಿತಿಗಳು ನಿಕ್ಷ್‌ಪಕ್ಷವಾಗಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ: ಶಾಲಾಭಿವೃದ್ಧಿ ಸಮಿತಿಗಳು ರಾಜಕೀಯ ರಹಿತ ಮತ್ತು ಜಾತ್ಯತೀತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಧನಂಜಯ ಹೇಳಿದರು.

ಪಟ್ಟಣದಲ್ಲಿ ಶನಿವಾರ ನಡೆದ ಕಸಬಾ ಹೋಬಳಿಯ ಸರ್ಕಾರಿ ಪ್ರಾಥಮಿಕ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ಸದಸ್ಯರ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ನಿಯಮಾವಳಿಗಳ ಮಾಹಿತಿ ಮತ್ತು ಕಾರ್ಯಕ್ರಮಗಳನ್ನು ತಿಳಿಸಿಕೊಡಬೇಕು. ಶಾಲೆಗಳು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಅಕ್ಷರದ ಅರಿವು ಮೂಡಿಸಿ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಸರ್ವ ಶಿಕ್ಷಣ ಅಭಿಯಾನ ಯೋಜನೆಯ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಶಾಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಆಯಾ ಬಿಆರ್‌ಸಿ ಮತ್ತು ಸಿಆರ್‌ಸಿ ಅಧಿಕಾರಿಗಳು ಗಮನ ನೀಡಬೇಕು ಎಂದು ತಿಳಿಸಿದರು.ಜಿ.ಪಂ. ಸದಸ್ಯ ಕೆ. ಮುದ್ದುರಾಜ್ ಯಾದವ್ ಮಾತನಾಡಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ನಿತ್ಯ ಶಾಲೆಗೆ ಭೇಟಿ ನೀಡಿ ಬಿಸಿಯೂಟದ ವ್ಯವಸ್ಥೆ ಮತ್ತು ಖರ್ಚಿನ ವಿವರಗಳು ಹಾಗೂ ಶಿಕ್ಷಕರ ಚಲನವಲನಗಳು, ಮಕ್ಕಳ ಕಲಿಕೆ  ಬಗ್ಗೆ ನಿಗಾ ಇಡಬೇಕು ಎಂದರು. ಪುರಸಭೆಯ ಅಧ್ಯಕ್ಷ ಪುರುಷೋತ್ತಮ್, ಇ.ಸಿ.ಒ. ಪರಮೇಶ್ವರ್, ನಾಗಯ್ಯ ಮಾತನಾಡಿದರು. ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಪಿ.ರಂಗಸ್ವಾಮಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುಣಶೇಖರ್, ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೈ. ನಂಜುಂಡಯ್ಯ, ದೈಹಿಕ ಶಿಕ್ಷಣಾಧಿಕಾರಿ ಅಶೋಕ್, ಸಮಾಜ ಸೇವಕ ವರದೋನಹಳ್ಳಿಯ ಲಕ್ಷ್ಮೀಪತಿ, ಗಂಗನರಸಿಂಹಯ್ಯ ಇತರರು ಇದ್ದರು. ತಾಲ್ಲೂಕಿನ ಕಸಬಾ ಮಾಡ್‌ಬಾಳ್ ಹೋಬಳಿಯ ಸಿಆರ್‌ಪಿ. ಮತ್ತು ಬಿಆರ್‌ಸಿ ಅಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.