ಗುರುವಾರ , ಏಪ್ರಿಲ್ 15, 2021
24 °C

ಶಾಲಾ ಡೆಸ್ಕ್ ಖರೀದಿಯಲ್ಲಿ ಅವ್ಯವಹಾರ

.ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ:  ಜಿಲ್ಲೆಯ 894 ಪ್ರಾಥಮಿಕ ಶಾಲೆಗಳಿಗೆ ಡೆಸ್ಕ್ ಖರೀದಿಸಲು ಸರ್ವಶಿಕ್ಷಣ ಯೋಜನೆ ಅಡಿಯಲ್ಲಿ ಸರ್ಕಾರವು ಬಿಡುಗಡೆಗೊಳಿಸಿದ ರೂ. 9.62 ಕೋಟಿ ಹಣದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.ಖರೀದಿಗೆ ಸಂಬಂಧಿಸಿದಂತೆ ಜಿಲ್ಲೆಯ ಪ್ರತಿಯೊಂದು ಶಾಲೆಯನ್ನು ಸಂಪರ್ಕಿಸಿ ಮಾಹಿತಿ ಸಂಗ್ರಹಿಸಲಾಗಿದ್ದು, ಶೇ. 80ರಷ್ಟು ಶಾಲೆಗಳಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಗಮನಕ್ಕೆ ತರಲಾಗಿದೆ ಎಂದು ಜಯ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ವೀರಣ್ಣ ಎಂ. ಕೋರಳ್ಳಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.ಖರೀದಿಯಲ್ಲಿ ಸರ್ಕಾರಿ ನಿಯಮಗಳನ್ನು ಪಾಲಿಸಿಲ್ಲ ಹಾಗೂ ಕಳಪೆಮಟ್ಟದ ಡೆಸ್ಕ್‌ಗಳನ್ನು ಖರೀದಿಸಲಾಗಿದೆ. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಾಮಾನ್ಯಸಭೆ ನಡೆಯುತ್ತಿದ್ದಾಗ ಪ್ರತಿಭಟನೆ ಮೂಲಕ ತನಿಖೆಗೆ ಒತ್ತಾಯಿಸಲಾಗಿತ್ತು. 26ರೊಳಗೆ ಬಿಇಒ ಹಾಗೂ ಬಿಆರ್‌ಸಿಗಳು ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಸೂಚಿಸಿದ್ದರು. ಈವರೆಗೂ ಅಧಿಕಾರಿಗಳು ಯಾವುದೇ ವರದಿ ಸಿದ್ಧಪಡಿಸಿಲ್ಲ.ಹೀಗಾಗಿ ವರದಿ ನೀಡದ ಅಧಿಕಾರಿಗಳು ಕೂಡಾ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದುಆರೋಪಿಸಿದರು.

ತನಿಖೆಯು ಪಾರದರ್ಶಕವಾಗಿ ನಡೆಯಬೇಕು. ಅವ್ಯವಹಾರ ತನಿಖೆಗೆ ಹೊರ ಜಿಲ್ಲೆಯ ಅಧಿಕಾರಿಗಳನ್ನು ನೇಮಿಸಬೇಕು. ಅವ್ಯವಹಾರದಲ್ಲಿ ಭಾಗಿಯಾದವರನ್ನು ಕೂಡಲೇ ವಜಾಗೊಳಿಸಬೇಕು. ವರದಿ ನೀಡುವಂತೆ ಸೂಚಿಸಿದರೂ ವರದಿಕೊಡದ ಅಧಿಕಾರಿಗಳನ್ನು ಸೇವೆ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.ಶಾಲಾ ಮುಖ್ಯಗುರುಗಳಿಗೆ ಮಾತ್ರ ಈ ಮೊದಲು ಕೋರ್ಟ್ ಮೂಲಕ ನೋಟಿಸ್ ನೀಡಲಾಗಿತ್ತು. ಇದೀಗ ಬಿಇಒ, ಬಿಆರ್‌ಸಿ, ಬಿಡಿಒ, ಸಮನ್ವಯಾಧಿಕಾರಿ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ತಿಳಿಸಿದರು.

ಪಾರದರ್ಶಕ ತನಿಖೆ ನಡೆದರೆ 500 ಶಾಲಾ ಮುಖ್ಯಗುರುಗಳು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು ಜೈಲು ಸೇರುವುದು ಗ್ಯಾರಂಟಿ ಎಂದು ಹೇಳಿದರು.ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಸಾರವಾಡ, ರುದ್ರಗೌಡ ಪಾಟೀಲ, ಬಿ.ವಿ. ನಾಯಕ, ರಹೀಮ್ ಪಟೇಲ್ ಸುದ್ದಿಗೋಷ್ಠಿಯಲ್ಲಿ  ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.