ಮಂಗಳವಾರ, ಮೇ 11, 2021
27 °C

ಶಾಲಾ ಪ್ರಾರಂಭೋತ್ಸವ: ಸಮವಸ್ತ್ರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕಾರಿಪುರ: ತಾಲ್ಲೂಕಿನ ಬಹುತೇಕ ಶಾಲೆಗಳಲ್ಲಿ ಶುಕ್ರವಾರ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಮಂಡಳಿ ಸದಸ್ಯರು ಶಾಲೆಗಳ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ತಾಲ್ಲೂಕಿನಲ್ಲಿ ಗುರುವಾರದಿಂದ ಶಾಲೆಗಳು ಆರಂಭವಾದರೂ, ಶುಕ್ರ ವಾರ ಪ್ರಾರಂಭೋತ್ಸವ ಕಾರ್ಯ ಕ್ರಮದ ಮೂಲಕ ಶಾಲೆಗಳು ಪ್ರಸ್ತುತ ವರ್ಷದ ತಮ್ಮ ಚಟುವಟಿಕೆಗಳನ್ನು ಅಧಿಕೃತವಾಗಿ ಆರಂಭಿಸಿದವು.ವಿವಿಧ ಶಾಲೆಗಳಲ್ಲಿ ಬಾಳೆಕಂಬ ಹಾಗೂ ಮಾವಿನ ತೋರಣ ಕಟ್ಟಿ ಶಾಲಾ ಶಿಕ್ಷಕರು ಹಾಗೂ ಶಾಲಾ ಭಿವೃದ್ಧಿ ಮಂಡಳಿ ಸದಸ್ಯರು ವಿದ್ಯಾರ್ಥಿ ಗಳನ್ನು ಸ್ವಾಗತಿಸಿದರು.ಹಲವು ಶಾಲೆಗಳಲ್ಲಿ ಹಾಜರಾದ ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಗಳನ್ನು ಎಸ್‌ಡಿಎಂಸಿ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ವಿತರಿಸಿದರು.ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಬಿಸಿಯೂಟದ ಜತೆ ಸಿಹಿಯನ್ನು ನೀಡಲಾಯಿತು. ಕೆಲವು ಗ್ರಾಮಗಳಲ್ಲಿ ಶಾಲೆಗಳ ಪ್ರಾರಂಭೋ ತ್ಸವ ಪ್ರಯುಕ್ತ ಶಿಕ್ಷಕರು, ಶಾಲಾ ಅಭಿವೃದ್ಧಿ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಕಲಾ ಮೇಳಗಳೊಂದಿಗೆ ಮೆರವಣಿಗೆ ನಡೆಸಿದರು.ಶಾಲೆಗಳ ಪ್ರಾರಂಭೋತ್ಸವಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಸಿದ್ದಲಿಂಗಪ್ಪ ಪ್ರಜಾವಾಣಿ ಯೊಂದಿಗೆ ಮಾತನಾಡಿ, ಅಧಿಕೃತವಾಗಿ ಶಾಲಾ ಪ್ರಾರಂಭೋತ್ಸವದ ದಿನ ದಂದು ಇಲಾಖೆಯ ಅಧಿಕಾರಿಗಳ ತಂಡ ಪ್ರತಿ ಶಾಲೆಗಳಿಗೆ ಭೇಟಿ ನೀಡಿ ಶಾಲೆಯ ಪ್ರಾರಂಭೋತ್ಸವ,  ಸ್ವಚ್ಛತೆ, ವೇಳಾಪಟ್ಟಿ, ಸಮವಸ್ತ್ರ, ಪುಸ್ತಕ ಸೇರಿದಂತೆ ಇತರೆ ಚಟುವಟಿಕೆ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಅವರು ತಿಳಿಸಿದರು.ಬೇಸಿಗೆ ರಜೆ ಮುಗಿಸಿ ಶಾಲೆಗಳು ಪ್ರಾರಂಭವಾಗಿದ್ದರೂ, ಕ್ರೀಡೆ ಹಾಗೂ ಸಂಬಂಧಿಕರ ಮನೆಯ ಭೇಟಿಯ ಚಟುವಟಿಕೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳಿಗೆ ಹಾಜರಾಗಿಲ್ಲ.ಕೆಲವು ಶಾಲೆಗಳಲ್ಲಿ ಮಾತ್ರ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಹಾಜರಾಗಿದ್ದು, ಸೋಮವಾರದಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯನ್ನು ಶಿಕ್ಷಣ ಇಲಾಖೆ ಹೊಂದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.