ಮಂಗಳವಾರ, ಮೇ 24, 2022
28 °C

ಶಾಲಾ ಮಕ್ಕಳಿಗೆ ಕಬ್ಬಿಣಾಂಶ ಮಾತ್ರೆ ವಿತರಣೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: 6 ರಿಂದ 10ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಪ್ರತೀ ವಾರ ಕಬ್ಬಿಣಾಂಶ ಮಾತ್ರೆ ವಿತರಿಸುವ ಕಾರ್ಯಕ್ರಮಕ್ಕೆ ಬುಧವಾರ ನಗರದಲ್ಲಿ ಚಾಲನೆ ನೀಡಲಾಯಿತು.ನಗರದ ಜೂನಿಯರ್ ಕಾಲೇಜು ವಠಾರದ ಪ್ರೌಢಶಾಲಾ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಪ್ಪ ಮಕ್ಕಳಿಗೆ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿದರು.  6ರಿಂದ 10ನೇ ತರಗತಿಯ ಶಾಲಾ ಮಕ್ಕಳಿಗೆ ಈ ಕಾರ್ಯಕ್ರಮದಡಿ ಪ್ರತಿ ಸೋಮವಾರ ಮಧ್ಯಾಹ್ನ ಊಟದ ಬಳಿಕ ಕಬ್ಬಿಣಾಂಶವುಳ್ಳ ಐರನ್ ಮತ್ತು ಪೋಲಿಕ್ ಆಸಿಡ್ ಮಾತ್ರೆ ನೀಡಲಾ ಗುತ್ತದೆ. ಕೇಂದ್ರ ಸರ್ಕಾರವು ಆರೋಗ್ಯ ಇಲಾಖೆಯ ಎನ್‌ಆರ್‌ಎಚ್‌ಎಂ ಯೋಜನೆಯಡಿ ಈ ಮಾತ್ರೆಗಳನ್ನು ಉಚಿ ತವಾಗಿ ಸರಬರಾಜು ಮಾಡು ತ್ತಿದ್ದು, ಮಾತ್ರೆ ನೀಲಿ ಬಣ್ಣದಿಂದ ಕೂಡಿರುತ್ತದೆ.  ಶಿಕ್ಷಣ ಇಲಾಖೆಯಿಂದ 1ರಿಂದ 5ನೇ ತರಗತಿಯ ಶಾಲಾ ಮಕ್ಕಳಿಗೆ ಪ್ರತೀ ವಿದ್ಯಾರ್ಥಿಗೆ ವರ್ಷಕ್ಕೆ 2 ಅಲ್‌ಬೆಂಡೋಜೋಲ್ ಮಾತ್ರೆ ಹಾಗೂ ವಾರಕ್ಕೆ 3ರಂತೆ 36 ವಾರಗಳ ಕಾಲ ಕಬ್ಬಿಣಾಂಶದ ಮಾತ್ರೆಗಳನ್ನು ನೀಡಲಾಗುತ್ತದೆ. ಇದಲ್ಲದೆ, 1ರಿಂದ 7ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ವರ್ಷಕ್ಕೆ 2 ವಿಟಾಮಿನ್ ಎ ಮಾತ್ರೆಗಳನ್ನೂ ವಿತರಿಸಲಾಗುವುದು.ಕಬ್ಬಿಣಾಂಶ ಮಾತ್ರೆಗಳನ್ನು ವಿತರಿ ಸುವ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಜಿ.ನಾಗೇಶ್, ಇದೊಂದು ಮಹತ್ತರ ಕಾರ್ಯಕ್ರಮ. ಇದರಿಂದ ಮಕ್ಕಳ ಪೌಷ್ಟಿಕಾಂಶ ಹೆಚ್ಚಳ ಗೊಂಡು ಆರೋಗ್ಯವೂ ಉತ್ತಮವಾಗಲಿದೆ. ಮಕ್ಕಳ ಸದೃಢ ಆರೋಗ್ಯದಿಂದ ಗುಣ ಮಟ್ಟದ ಶಿಕ್ಷಣಕ್ಕೆ ನಾಂದಿಯಾಗಲಿದೆ ಎಂದು ಹೇಳಿದರು.ಮಕ್ಕಳು ರಕ್ತ ಹೀನತೆಯಿಂದ ಬಳಲು ವುದನ್ನು ತಪ್ಪಿಸಲು ಕಬ್ಬಿಣಾಂಶದ ಮಾತ್ರೆ ಗಳನ್ನು ನೀಡಲಾ ಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ಈ ಕಾರ್ಯ ಕ್ರಮವನ್ನು ದೇಶದಾದ್ಯಂತ ಜಾರಿಗೆ ತರಲಾಗಿದೆ. ಇದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಯಾಗಲಿದೆ ಎಂದರು.

ಡಯಟ್ ಪ್ರಾಂಶುಪಾಲ ಬಸವೇ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇ ಗೌಡ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.