ಮಂಗಳವಾರ, ಜೂನ್ 22, 2021
22 °C

ಶಾಲೆಗಳಲ್ಲಿ ಅಕ್ರಮ ಪ್ರವೇಶ-ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಔರಾದ್: ಸರ್ಕಾರದ ನೀತಿ ನಿಯಮ ಉಲ್ಲಂಘಿಸಿ ಹೆಚ್ಚುವರಿ ವಿದ್ಯಾರ್ಥಿಗಳ ಪ್ರವೇಶ ಪಡೆದುಕೊಂಡಿದ್ದರೆನ್ನಲಾದ ಇಲ್ಲಿಯ ನವಚೇತನ ಖಾಸಗಿ ಶಾಲೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಜಾರಾಜ್ಯ ಸಂಘರ್ಷ ಸಮಿತಿ ಆಗ್ರಹಿಸಿದೆ.

 

ಸಮಿತಿ ಅಧ್ಯಕ್ಷ ಸುಧಾಕರ ಕೊಳ್ಳೂರ್, ಧನಾಜಿ ಕಾಂಬಳೆ, ಪ್ರಕಾಶ ಅಲ್ಮಾಜೆ, ಉಮಾಕಾಂತ ಸೋನೆ, ನಾಗರಾಜ ಇತರರು ಸೋಮವಾರ ಇಲ್ಲಿಯ ಮಿನಿ ವಿಧಾನಸೌಧ ಎದುರು ಕಣ್ಣಿಗೆ ಕಪ್ಪು ಪಟ್ಟಿಕೊಂಡು ಕೆಲ ಕಾಲ ಪ್ರತಿಭಟಿಸಿದರು.ಇಲ್ಲಿಯ ಕೆಲ ಖಾಸಗಿ ಶಾಲೆಗಳು ಸರ್ಕಾರದ ನಿಯಮ ಗಾಳಿಗೆ ತೂರಿ ಬೇಕಾಬಿಟ್ಟೆ ಪ್ರವೇಶ ಪಡೆದುಕೊಳ್ಳುತ್ತಿದ್ದಾರೆ. 30ರಿಂದ 40 ವಿದ್ಯಾರ್ಥಿಗಳಿಗೆ ಪ್ರವೇಶ ಕೊಡಬೇಕಾದ ಒಂದು ತರಗತಿಯಲ್ಲಿ ನೂರು ವಿದ್ಯಾರ್ಥಿಗಳಿಗೂ ಪ್ರವೇಶ ಪಡೆದುಕೊಳ್ಳುತ್ತಿದ್ದಾರೆ ಎಂದು ನವಚೇತನ ಶಾಲೆ ವಿರುದ್ಧ ದೂರಿದರು.

 

ಗುರುಕುಲ ಮಾದರಿ ಶಿಕ್ಷಣ ಕೊಡುವುದಾಗಿ ನಂಬಿಸಿ ಹಳ್ಳಿ ಹಳ್ಳಿಯಿಂದ ಮಕ್ಕಳಿಗೆ ವಾಹನದಲ್ಲಿ ಕೂಡಿಸಿಕೊಂಡು ತರಲಾಗುತ್ತಿದೆ. ಶಿಕ್ಷಣ ವ್ಯಾಪಾರವಾಗಿ ಮಾಡಿಕೊಂಡು ಮುಗ್ಧ ಪಾಲಕರನ್ನು ವಂಚನೆ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.ಇಷ್ಟೆಲ್ಲ ನಡೆಯುತ್ತಿರುವುದು ಗೊತ್ತಿದ್ದರೂ ಶಿಕ್ಷಣಾಧಿಕಾರಿಗಳು ಮಾತ್ರ ಕಣ್ಣು ಬಾಯಿ ಮುಚ್ಚಿಕೊಂಡು ಕುಳಿತ್ತಿದ್ದಾರೆ. ಶಿಕ್ಷಣಾಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಧೋರಣೆಯಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ ಎಂದು ದೂರಿದರು.ನಿಯಮಬಾಹಿರ ಪ್ರವೇಶ ಪಡೆದುಕೊಳ್ಳುತ್ತಿರುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಶಿಕ್ಷಣ ಇಲಾಖೆ ವಿರುದ್ಧ ನ್ಯಾಯಾಲಯದಲ್ಲಿ ಖಟ್ಲೆ ಹೂಡಲಾಗುವುದು ಎಂದು ಎಚ್ಚರಿಸಿದ್ದಾರೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಬರೆದ ಮನವಿಪತ್ರವನ್ನು ತಹಸೀಲ್ದಾರ್ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.