ಶಾಲೆಗಳಲ್ಲಿ ಶೌಚಾಲಯ ಸುಪ್ರೀಂನಿಂದ ಗಡುವು

7

ಶಾಲೆಗಳಲ್ಲಿ ಶೌಚಾಲಯ ಸುಪ್ರೀಂನಿಂದ ಗಡುವು

Published:
Updated:

ನವದೆಹಲಿ (ಪಿಟಿಐ): ದೇಶದ ಎಲ್ಲಾ ಶಾಲೆಗಳಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ನಿರ್ಮಾಣ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಇನ್ನು ಆರು ತಿಂಗಳೊಳಗೆ  ಒದಗಿಸಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ. ಈ ಸಂಬಂಧ ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ ಎಲ್ಲಾ ಆದೇಶಗಳನ್ನು ಕೋರ್ಟ್ ನಿಗದಿಪಡಿಸಿರುವ ಕಾಲಮಿತಿಯೊಳಗೆ ಜಾರಿಗೆ ತರುವಂತೆಯೂ  ನ್ಯಾಯಮೂರ್ತಿ ಕೆ. ಎಸ್. ರಾಧಾಕೃಷ್ಣನ್ ನೇತೃತ್ವದ ಪೀಠ ತಿಳಿಸಿದೆ.ಸರ್ಕಾರಿ ಶಾಲೆಗಳಲ್ಲಿ, ಅದರಲ್ಲೂ ಬಾಲಕಿಯರಿಗೆ ಶೌಚಾಲಯಗಳನ್ನು ನಿರ್ಮಿಸಬೇಕೆಂದು ಸುಪ್ರೀಂಕೋರ್ಟ್ ಕಳೆದ ಅಕ್ಟೋಬರ್ 18ರಂದು ಎ್ಲ್ಲಲ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ನೀಡಿತ್ತು.ಈ ನಿಟ್ಟಿನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಪರಿಶೀಲನೆ ನಡೆಸಿದ ವೇಳೆ ಸುಪ್ರೀಂಕೋರ್ಟ್ ಈ ಆದೇಶವನ್ನು ನೀಡಿದೆ.ಶೌಚಾಲಯಗಳಿಲ್ಲದ ಶಾಲೆಗಳಿಗೆ ಪಾಲಕರು ತಮ್ಮ ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ  ಎಂದು  ಸಮೀಕ್ಷೆಯ ಆಧಾರದಲ್ಲಿ ಕೋರ್ಟ್ ಈ ಹಿಂದೆ ಶಾಲೆಗಳಲ್ಲಿ ಶೌಚಾಲಯ ಅಗತ್ಯ ಎಂದು ಆದೇಶಿಸಿತ್ತು.ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸದೇ ಇರುವುದು ಉಚಿತ ಹಾಗೂ ಕಡ್ಡಾಯ ಶಿಕ್ಷಣದ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದೂ ಸುಪ್ರೀಂಕೋರ್ಟ್  ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry