ಶಾಲೆಗಾಗಿ ನಾವು-ನೀವು ಕಾರ್ಯಕ್ರಮ

ಶುಕ್ರವಾರ, ಜೂಲೈ 19, 2019
28 °C

ಶಾಲೆಗಾಗಿ ನಾವು-ನೀವು ಕಾರ್ಯಕ್ರಮ

Published:
Updated:

ಚಾಮರಾಜನಗರ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿರುವ ಶಾಲೆಗಾಗಿ ನಾವು-ನೀವು ಕಾರ್ಯಕ್ರಮದ ಜಿಲ್ಲಾಮಟ್ಟದ ಉದ್ಘಾಟನಾ ಸಮಾರಂಭ  ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ನಿಟ್ರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು. 5ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ.ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ. ರಾಜೇಶ್ವರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ ಹಾಗೂ ನಿಯಮದಡಿ 6ರಿಂದ 14ವರ್ಷ ವಯೋಮಾನದ ಎಲ್ಲ ಮಕ್ಕಳು ದಾಖಲಾಗಿರುವ ಚಿಕ್ಕಾಟಿ ಕ್ಲಸ್ಟರ್ ರಾಜ್ಯದಲ್ಲೇ ಮೊಟ್ಟಮೊದಲ ಸಂಪೂರ್ಣ ದಾಖಲಾತಿ ಕ್ಲಸ್ಟರ್ ಎಂದು ಇದೇ ವೇಳೆ ಅಧಿಕೃತವಾಗಿ ಘೋಷಣೆಯಾಗಲಿದೆ.ಜಿಲ್ಲೆಯ ಎಲ್ಲ 851 ಸರ್ಕಾರಿ ಶಾಲೆಗಳಲ್ಲಿ ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆ ನಡೆಸಲಾಗಿದೆ. ಎಲ್ಲ ಜನಪ್ರತಿನಿಧಿಗಳು, ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು ಶಾಲೆಗಳಿಗೆ ಭೇಟಿ ನೀಡಿ ಗುಣಾತ್ಮಕ ಶಿಕ್ಷಣಕ್ಕೆ ಬದ್ಧತೆ ವ್ಯಕ್ತಪಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಬಹುಮುಖ್ಯವಾಗಿ ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ ಮತ್ತು ನಿಯಮದಡಿ ಜಾರಿಗೊಳಿಸಲಾದ ಕ್ರಮಗಳು, ಶಿಕ್ಷಣ ಜಾಗೃತಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರುವ ಕ್ರಮ, ದಾನಿಗಳ ಮೂಲಕ ಶಾಲೆಯ ಶೈಕ್ಷಣಿಕ ಮತ್ತು ಭೌತಿಕ ಸಂಪನ್ಮೂಲ  ವೃದ್ಧಿಸುವ ಕುರಿತು ತಿಳಿವಳಿಕೆ ನೀಡಲಾಗುತ್ತದೆ.ಶಾಲೆಯ ಆಸ್ತಿ ಸಂರಕ್ಷಣೆ, ಮಕ್ಕಳ ಪ್ರಗತಿ, ಇತರೇ ಶಿಕ್ಷಣ ವ್ಯವಸ್ಥೆಯನ್ನು ಬಲವರ್ಧನೆಗೊಳಿಸುವ ಚಟುವಟಿಕೆ ನಡೆಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮವನ್ನು ಜನಪ್ರತಿನಿಧಿಗಳು, ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಪೋಷಕರು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬೆಳ್ಳಶೆಟ್ಟಿ ಕೋರಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry