ಶುಕ್ರವಾರ, ಏಪ್ರಿಲ್ 16, 2021
31 °C

ಶಾಲೆಗೆ ಬೀಗಜಡಿದು ಗ್ರಾಮಸ್ಥರ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಳಲ್ಕೆರೆ: ತಾಲ್ಲೂಕಿನ ದೊಗ್ಗನಾಳ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು, ಹೆಚ್ಚುವರಿ ಶಿಕ್ಷರನ್ನು ನೇಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಮಂಗಳವಾರ ಶಾಲೆಗೆ ಬೀಗಜಡಿದು ಪ್ರತಿಭಟಿಸಿದರು.ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರಿಲ್ಲ. ಕೇವಲ ನಾಲ್ವರು ಶಿಕ್ಷಕರಿದ್ದು, ಒಬ್ಬರು ದೀರ್ಘಾವಧಿ ರಜೆ ಮೇಲೆ ತೆರಳಿದ್ದಾರೆ. ಆದ್ದರಿಂದ ಪಾಠ ಪ್ರವಚನಗಳಿಗೆ ತೀವ್ರ ತೊಂದರೆಯಾಗಿದೆ. ಇರುವ ಮೂವರು ಶಿಕ್ಷಕರು ಏಳು ತರಗತಿಗಳಿಗೆ ಪಾಠ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಕಲಿಕಾಮಟ್ಟ ಕಡಿಮೆಯಾಗಿದೆ. ಶೀಘ್ರವೇ ಶಿಕ್ಷಕರನ್ನು ನಿಯೋಜಿಸದಿದ್ದರೆ ಶಾಲೆ ಮುಚ್ಚಬೇಕಾಗುತ್ತದೆ ಎಂದರು.ಶಿಕ್ಷಕರ ಕೊರತೆ ಬಗ್ಗೆ ಬಿಇಒ ಗಮನಕ್ಕೆ ತಂದಾಗ, ಪಕ್ಕದ ಹನುಮಲಿ ಶಾಲೆಯ ಮಹೇಶ್ವರಪ್ಪ ಎಂಬ ಶಿಕ್ಷಕರನ್ನು ನಿಯೋಜನೆ ಮಾಡಿದ್ದರು. ಆದರೆ, ಅವರು ಒಂದು ದಿನ ಕರ್ತವ್ಯಕ್ಕೆ ಹಾಜರಾಗಿ ಮತ್ತೆ ಮೂಲಸ್ಥಳಕ್ಕೆ ಹೋಗ್ದ್ದಿದಾರೆ ಎಂದು ತಿಳಿಸಿದರು.ಜಿಲ್ಲಾ ಪಂಚಾಯ್ತಿ ಆರೋಗ್ಯ, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಪ್ಪ, ಸದಸ್ಯೆ ಪಾರ್ವತಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್. ಮಂಜುನಾಥ್, ಶಿಕ್ಷಣ ಸಂಯೋಜಕ ಡಿ. ಗೋವಿಂದಪ್ಪ ಸ್ಥಳಕ್ಕೆ ಆಗಮಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಸಿ.ಕೆ. ನಾಗೇಂದ್ರಪ್ಪ, ಕುಮಾರ್, ಜಯಪ್ಪ ನಾಯ್ಕ, ಗ್ರಾಮ ಪಂಚಾಯ್ತಿ ಸದಸ್ಯ ಆರ್. ನಾಗರಾಜ್, ಎಸ್. ವೆಂಕಟೇಶ್, ಡಿ. ಜಯಪ್ಪ, ಯರವಂತಪ್ಪ, ರಾಜಪ್ಪ, ಮಂಜುನಾಥ್, ಗಂಗಾಧರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.