ಮಂಗಳವಾರ, ಮಾರ್ಚ್ 2, 2021
23 °C

ಶಾಲೆ ಅಭಿವೃದ್ಧಿಗೆ ರೂ 29.82 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಲೆ ಅಭಿವೃದ್ಧಿಗೆ ರೂ 29.82 ಕೋಟಿ

ಬೆಂಗಳೂರು: ಹೊಸಕೋಟೆ, ದೇವನಹಳ್ಳಿ, ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ 1,105 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ವ ಶಿಕ್ಷಣ ಅಭಿಯಾನದ ಅಡಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 29.82 ಕೋಟಿ ರೂಪಾಯಿ ಅನುದಾನ ದೊರೆತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎನ್. ಬಚ್ಚೇಗೌಡ ತಿಳಿಸಿದರು.ಇಲ್ಲಿನ ಶಿಕ್ಷಕರ ಸದನದಲ್ಲಿ ಶನಿವಾರ ನಡೆದ ಸರ್ವ ಶಿಕ್ಷಣ ಅಭಿಯಾನದ ಜಿಲ್ಲಾ ಅನುಷ್ಠಾನ ಸಮಿತಿಯ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಈ ಅಭಿಯಾನದ ಅಡಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ನಿಗದಿ ಮಾಡಿದ ಅನುದಾನದ 16 ಕೋಟಿ ರೂಪಾಯಿ ಮೊತ್ತದಲ್ಲಿ 13.68 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಆಗಿದೆ~ ಎಂದು ತಿಳಿಸಿದರು.ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 115 ಕೊಠಡಿಗಳನ್ನು ಅಗತ್ಯವಿರುವ ಶಾಲೆಗಳಲ್ಲಿ ನಿರ್ಮಿಸಲಾಗುವುದು. ಇದಕ್ಕಾಗಿ ಶಾಲೆಗಳಿಗೆ ತಲಾ 5.45 ಲಕ್ಷ ರೂಪಾಯಿ ನೀಡಲಾಗುವುದು. ಶಾಲೆಗಳ ಆವರಣ ಗೋಡೆ ನಿರ್ಮಾಣಕ್ಕೆ ಈ ಬಾರಿ ಒಟ್ಟು 7.5 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು ಎಂದರು.ನಾಲ್ಕು ತಾಲ್ಲೂಕುಗಳಲ್ಲಿ 340 ಮಕ್ಕಳು ಶಾಲೆಗೆ ಹೋಗುತ್ತಿರಲಿಲ್ಲ. ಅವರ ಪೈಕಿ 140 ಮಕ್ಕಳನ್ನು ಶಾಲೆಗೆ ಹೋಗುವಂತೆ ಮಾಡಲಾಗಿದೆ. ಈ ಬಾರಿ 19 ಶಾಲೆಗಳಲ್ಲಿ ಹೊಸದಾಗಿ ಕಂಪ್ಯೂಟರ್ ಕಲಿಕೆ ಆರಂಭಿಸಲಾಗುವುದು. 34 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಸಿಬಿಎಸ್‌ಸಿ ಪಠ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.