ಶಾಲೆ ನಿಜವಾದ ದೇವಾಲಯ

7

ಶಾಲೆ ನಿಜವಾದ ದೇವಾಲಯ

Published:
Updated:

ಯಲಹಂಕ: `ವಿದ್ಯೆ ನೀಡುವ ಮೂಲಕ ಮಕ್ಕಳ ಭವಿಷ್ಯವನ್ನು ಉತ್ತಮ ಮಟ್ಟದಲ್ಲಿ ರೂಪಿಸುವ ಪಾಠ ಶಾಲೆಗಳು ನಿಜವಾದ ದೇವಾಲಯಗಳು~ ಎಂದು ಮಾಜಿ ಸಚಿವ ಎ.ಕೃಷ್ಣಪ್ಪ ಅಭಿಪ್ರಾಯಪಟ್ಟರು.ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಥಣಿಸಂದ್ರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಯಗೋಪಾಲಗೌಡ ಅವರ ವತಿಯಿಂದ ಮಕ್ಕಳಿಗೆ ಉಚಿತವಾಗಿ ನೀಡಲಾದ ನೋಟ್ ಪುಸ್ತಕ ವಿತರಿಸಿ ಮಾತನಾಡಿದ ಅವರು, `ಭವಿಷ್ಯದಲ್ಲಿ ದೇಶವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯುವಲ್ಲಿ ಮಕ್ಕಳ ಪಾತ್ರ ಅಮೂಲ್ಯವಾದುದು~ ಎಂದರು.ಶಾಸಕ ಕೃಷ್ಣಬೈರೇಗೌಡ, `ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಿಸಿದರು.   ಜಿ.ಪಂ. ಮಾಜಿ ಅಧ್ಯಕ್ಷ ರವಿಕುಮಾರ್, ನಗರಸಭಾ ಮಾಜಿ ಅಧ್ಯಕ್ಷರಾದ ಎಂ.ಹನುಮಂತೇಗೌಡ, ಶ್ರೀನಿವಾಸರಾಜು, ಕೆ.ಆರ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಡಿ.ಬಿ.ಸುರೇಶ್ ಇನ್ನಿತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry