ಸೋಮವಾರ, ಮೇ 10, 2021
25 °C

`ಶಾಲೆ ಸಬಲೀಕರಣಕ್ಕೆ ಪಾಲ್ಗೊಳ್ಳುವಿಕೆ ಅಗತ್ಯ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು:  ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಸವರಾಜಪ್ಪ ತಿಳಿಸಿದರು.ನಗರದ ಆಜಾದ್ ಪಾರ್ಕ್ ಕನ್ನಡ ಹಿರಿಯ ಪ್ರಥಮಿಕ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿ ಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಶಾಲೆಯಲ್ಲಿ ಓದುವ ಮಕ್ಕಳು ದಡ್ಡರಲ್ಲ ಎಂಬುದನ್ನು ಮನಗಂಡು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಲು ಪೋಷಕರು ಮುಂದಾಗಬೇಕು ಎಂದರು.

ಶಾಲೆಗಳಲ್ಲಿ ಎಲ್ಲ ಸೌಕರ್ಯಗಳಿದ್ದರೂ ಮಕ್ಕಳ ಸಂಖ್ಯೆ ಕಡಿಮೆಯಾಗಿ, ಅನೇಕ ಶಾಲೆಗಳು ಮುಚ್ಚುವ ಹಂತ ತಲುಪಿವೆ ಎಂದರು.ಜಿಲ್ಲಾ ಗಮಕ ಕಲಾ ಪರಿಷತ್ ಅಧ್ಯಕ್ಷ ರಾಮಸುಬ್ರಾಯ ಶೇಟ್ ಮಾತನಾಡಿ, ಮನುಷ್ಯರಿಗೆ ಆಹಾರ, ಗಾಳಿ, ನೀರು ಎಷ್ಟು ಮುಖ್ಯವೋ ವಿದ್ಯೆ ಕೂಡ ಅಷ್ಟೆ ಮುಖ್ಯ. ಸರ್ಕಾರಿ ಶಾಲೆಗಳ ಶಿಕ್ಷಕರು ಶ್ರದ್ಧೆ, ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ.ನಾಗೇಶ್ ಮಾತನಾಡಿ, ಶಾಲೆ ಪ್ರವೇಶದ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬಿಸಿಯೂಟದ ಜತೆಗೆ ಸಿಹಿ ಊಟ ನೀಡ ಲಾಗುತ್ತಿದೆ. ಶೇ.80ರಷ್ಟು ಪಠ್ಯ ಪುಸ್ತಕಗಳನ್ನು ಮಕ್ಕಳಿಗೆ ತಲುಪಿಸಲಾಗಿದೆ ಎಂದು ಹೇಳಿದರು.ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳೊಂದಿಗೆ ಪೈಪೋಟಿಗೆ ಇಳಿದಿವೆ. ಪ್ರಾಥಮಿಕ ಶಾಲೆಗಳಿಗೆ ಹೋಲಿಸಿದರೆ ಪ್ರೌಢಶಾಲೆಗಳಲ್ಲಿ ಕಲಿಕೆ ಫಲಿತಾಂಶ ಉತ್ತಮವಾಗಿದೆ ಎಂದರು.ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಶಿಕ್ಷಣ ಎಲ್ಲರಿಗೂ ನೀಡಿರುವುದು ಸರ್ಕಾರದ ಕರ್ತವ್ಯ. ಮುಂದಿನ ದಿನಗಳಲ್ಲಿ ಅನೇಕ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳಿಗೆ ಪೈಪೋಟಿ ನೀಡಲಾಗದೆ ಬಾಗಿಲು ಮುಚ್ಚುವ ಸ್ಥಿತಿ ತಲುಪಲಿವೆ ಎಂದರು.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎನ್.ಎಸ್.ಜಗದೀಶಾಚಾರ್ ಮಾತನಾಡಿದರು. ಶಿಕ್ಷಣ ಸಂಯೋಜಕರಾದ ಓಂಕಾರಪ್ಪ, ನಂಜುಂಡಯ್ಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಪಠ್ಯ, ನೋಟ್ ಪುಸ್ತಕ ವಿತರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.