ಶನಿವಾರ, ಮೇ 15, 2021
24 °C

ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಆದ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಮನಾಬಾದ್: ಬಹು ಗ್ರಾಮಗಳ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.ತಾಲ್ಲೂಕಿನ ಹಳ್ಳಿಖೇಡ(ಬಿ) ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಬೀದರ್, ವಿಶ್ವಬ್ಯಾಂಕ್ ನೆರವಿನ ಜಲ ನಿರ್ಮಲ ಯೋಜನೆ ಹೆಚ್ಚುವರಿ ಅನುದಾನ ಅಡಿಯಲ್ಲಿ ಹಳ್ಳಿಖೇಡ(ಬಿ) ಮತ್ತು 13 ಗ್ರಾಮಗಳ ನದಿ ನೀರು ಆಧಾರಿತ ರೂ. 16 ಕೋಟಿ ಮೊತ್ತದ ಕುಡಿಯುವ ನೀರಿನ ಕಾಮಗಾರಿ ಉದ್ಘಾಟನೆ ನೆರವೇರಿಸಿ ಅವರು ಮಾತನಾ–ಡಿದರು.ಅಂತರ್ಜಲ ಪ್ರಮಾಣ ಕುಸಿಯುತ್ತಿರುವುದು ಮತ್ತು ಕೊಳವೆಬಾವಿ ತೋಡುವುದಕ್ಕೆ ನಿರ್ಬಂಧ ನಿಮಿತ್ತ ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಕೊಳವೆಬಾವಿ ತೋಡಲಾಗುತ್ತಿದೆ. ನದಿ ನೀರು ಆಧಾರದ ಯೋಜನೆಗಳ ಮೂಲಕ ಶುದ್ಧನೀರು ಪೂರೈಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ರೇವುನಾಯಕ ಬೆಳಮಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಜಶೇಖರ ಪಾಟೀಲ ಕ್ಷೇತ್ರದಲ್ಲಿ ಈವರೆಗೆ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು.

ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ, ಮಾಜಿ ಶಾಸಕ ರಾಜೇಂದ್ರ ವರ್ಮಾ, ಸುಭಾಷ ಕಲ್ಲೂರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಾಬುರಾವ ಕಾರಭಾರಿ ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.