ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೆ ಒತ್ತಾಯ
ಆನೇಕಲ್: ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಮಂಜೂರಾತಿಗೆ ಸಚಿವ ಎ.ನಾರಾಯಣಸ್ವಾಮಿ ಅವರು ಕ್ರಮ ಕೈಗೊಳ್ಳಬೇಕು ಎಂದು ಪುರಸಭಾ ಸದಸ್ಯ ವಿ.ರಾಮಕೃಷ್ಣ ಒತ್ತಾಯಿಸಿದ್ದಾರೆ.
ಆನೇಕಲ್ನ 23 ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಕೊಳವೆ ಬಾವಿಗಳು ಬತ್ತಿಹೋಗಿದ್ದು, ನೀರಿನ ಸಮಸ್ಯೆ ಉಲ್ಬಣಿಸಿದೆ. ಕುಡಿಯುವ ನೀರಿನ ಯೋಜನೆಗಾಗಿ 3.ಕೋಟಿ ರೂಪಾಯಿಗಳ ಯೋಜನೆ ಯನ್ನು ಈ ಹಿಂದೆ ಕೈಗೊಳ್ಳಲಾಗಿತ್ತು. ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. 1998ರಲ್ಲಿ ಹೊಸೂರು ರಸ್ತೆಯಲ್ಲಿ ನಿರ್ಮಿಸಿರುವ ಓವರ್ ಹೆಡ್ ಟ್ಯಾಂಕ್ ಇಂದಿಗೂ ಕಾರ್ಯನಿರ್ವಹಿಸುತ್ತಿಲ್ಲ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜನ ಪ್ರತಿನಿಧಿಗಳು ಕ್ರಿಯಾ ಯೋಜನೆಯನ್ನು ರೂಪಿಸಿ ಬೇಸಿಗೆಯ ಅವಧಿಯ ಸಮಸ್ಯೆ ನಿಭಾಯಿಸಲು ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇಲ್ಲಿನ ನಾಗರಿಕರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದರೂ ಮುತ್ಯಾಲಮಡುವು ಯೋಜನೆಗೆ ಸಚಿವರು ಕಾಳಜಿ ತೋರಿ 5 ಕೋಟಿ ರೂ. ಮಂಜೂರು ಮಾಡಿಸಿದ್ದಾರೆ. ಇದಕ್ಕಿಂತಲೂ ಮುಖ್ಯವಾದ ಪಟ್ಟಣದ ಜನತೆಯ ದಿನ ನಿತ್ಯದ ಸಮಸ್ಯೆಯಾದ ಕುಡಿಯುವ ನೀರಿನ ಪೂರೈಕೆಗೆ ನೂತನ ಯೋಜನೆ ಮಂಜೂರು ಮಾಡಿಸಲು ಆದ್ಯತೆ ನೀಡಬೇಕು.
ಕೊಳವೆ ಬಾವಿಗಳನ್ನು ಕೊರೆಯಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.