ಶಾಶ್ವತ ನೀರಾವರಿ ಯೋಜನೆ ಜಾರಿಗೆ ಆಗ್ರಹ: ರ‌್ಯಾಲಿ

7

ಶಾಶ್ವತ ನೀರಾವರಿ ಯೋಜನೆ ಜಾರಿಗೆ ಆಗ್ರಹ: ರ‌್ಯಾಲಿ

Published:
Updated:

ಬಾಗೇಪಲ್ಲಿ: ಶಾಶ್ವತ ನೀರಾವರಿ ಯೋಜನೆ ಜಾರಿ ಮಾಡುವ ಮೂಲಕ ನದಿ, ನಾಲೆಗಳಿಲ್ಲದ ಸುಮಾರು 7 ಜಿಲ್ಲೆಗಳಿಗೆ ಕುಡಿಯುವ ನೀರು ಕಲ್ಪಿಸಬೇಕು. ಸಾರ್ವಜನಿಕರು ಕುಡಿಯುವ ನೀರಿಗಾಗಿ ಹೋರಾಟ ನಡೆಸಬೇಕಾದ ಅನಿವಾರ್ಯ ಎದುರಾಗಿದೆ ಎಂದು ಎಸ್.ಎನ್.ಸುಬ್ಬಾರೆಡ್ಡಿ ಅಭಿಮಾನಿ ಬಳಗದ ಅಧ್ಯಕ್ಷ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.ಪಟ್ಟಣದ ನ್ಯಾಷನಲ್ ಕಾಲೇಜಿನ ಮುಂಭಾಗ ಶುಕ್ರವಾರ ಎಸ್.ಎನ್.ಸುಬ್ಬಾರೆಡ್ಡಿ ಅಭಿಮಾನಿ ಬಳಗದ ಸದಸ್ಯರು ಹಮ್ಮಿಕೊಂಡಿದ್ದ ಬೈಕ್‌ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬರಡು ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ತೊಂದರೆ ಆಗಿದೆ. ಇದರಿಂದ ರೈತರು ಕೂಲಿಗಾಗಿ ನಗರ ಪ್ರದೇಶಗಳಿಗೆ ವಲಸೆ ಹೊರಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಕುಡಿಯುವ ನೀರು, ಬೆಳೆಗಳಿಗೆ ಶಾಶ್ವತ ನೀರಾವರಿ ಕಲ್ಪಿಸಬೇಕು. ಸಂಸದರು, ಶಾಸಕರು ಹಾಗೂ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಶಾಶ್ವತ ನೀರಾವರಿ ಕಲ್ಪಿಸಲು ಹೋರಾಡಬೇಕು ಎಂದರು.ಪ್ರಮುಖ ರಸ್ತೆಗಳಲ್ಲಿ ಬೈಕ್ ರ‌್ಯಾಲಿ ನಡೆಯಿತು. ನಂತರ ರಾಷ್ಟ್ರೀಯ ಹೆದ್ದಾರಿ- 7ರ ಪೆರೇಸಂದ್ರದ ಮೂಲಕ ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಭಾಗವಹಿಸಲು ತೆರಳಿದರು. ರ‌್ಯಾಲಿಯಿಂದ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.  ಮುಖಂಡರಾದ ಚಿಕ್ಕನರಸಿಂಹಯ್ಯ, ಚೆಂಡೂರು ವೆಂಕಟೇಶ್ ಇತರರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry