ಗುರುವಾರ , ಮೇ 13, 2021
34 °C

ಶಾಶ್ವತ ಪರಿಹಾರಕ್ಕೆ ಮುಂದಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾವೇರಿ ಜಲವಿವಾದ ಮತ್ತೊಮ್ಮೆ ಬೀದಿಗೆ ಬಂದಿದೆ. ಹಠಮಾರಿ ತಮಿಳನಾಡು ಮುಖ್ಯಮಂತ್ರಿ ಜಯಲಲಿತಾ ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಕೋರಿದ್ದಾರೆ.ಆದರೆ ನೀರು ಹಂಚಿಕೆ ವಿಷಯದಲ್ಲಿ ತಾರತಮ್ಯ ನಡೆದಿಲ್ಲ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.  ಈ ಸಲ ಸಂಸತ್ತಿನಲ್ಲಿ ಪಕ್ಷಭೇದ ಮರೆತು ನಮ್ಮ ಸಂಸದರು ಒಗ್ಗಟಿನ ಧ್ವನಿಗೂಡಿಸಿದ್ದು ಸ್ವಾಗತಾರ್ಹ.ತಮಿಳುನಾಡಿಗೆ ಸೇರಬೇಕಾದ ನೀರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಹರಿದು ಹೋಗುತ್ತಿದ್ದರೂ ಅದನ್ನು ಸಮರ್ಥವಾಗಿ ಬಳಸಿಕೊಳ್ಳದೆ ನಮ್ಮ ರಾಜ್ಯದ ಮೇಲೆ ಗೂಬೆ ಕೂಡಿಸುವ ಕಾರ್ಯ ಮುಂದುವರಿಸಿದೆ.ಇದು ಖಂಡನೀಯ. ಪ್ರತಿ ವರ್ಷ ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದರೂ ಸರಿಯಾದ ತೀರ್ಮಾನ ಕೈಗೊಳ್ಳುವಲ್ಲಿ ಎಡುವುತ್ತಿದ್ದು ಈಗಲಾದರೂ ಶಾಶ್ವತ ಪರಿಹಾರಕ್ಕೆ ಮುಂದಾಗಲಿ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.