ಶಾಸಕರಿಂದ ಕಾಮಗಾರಿ ಪರಿಶೀಲನೆ

7

ಶಾಸಕರಿಂದ ಕಾಮಗಾರಿ ಪರಿಶೀಲನೆ

Published:
Updated:

ಕೃಷ್ಣರಾಜಪುರ:  `ಆಯಾ ಬಡಾವಣೆಗಳಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆಗೆ ಬಡಾವಣೆಯ ಹಿರಿಯರನ್ನು ಒಳಗೊಂಡ ಸಮಿತಿ ರಚಿಸಲು ಬಿಬಿಎಂಪಿ ಸದಸ್ಯರಿಗೆ ಸೂಚಿಸಲಾಗಿದೆ~ ಎಂದು ಶಾಸಕ ಎನ್.ಎಸ್.ನಂದೀಶ ರೆಡ್ಡಿ ತಿಳಿಸಿದರು.ಕಳಪೆ ಹಾಗು ನಿಧಾನಗತಿ ಕಾಮಗಾರಿ ದೂರಿನ ಹಿನ್ನೆಲೆಯಲ್ಲಿ ಸ್ಥಳೀಯ ವಾಸವಿ ಮಹಲ್ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಕೈಗೊಂಡಿರುವ  ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.ಕಾಮಗಾರಿಗಳನ್ನು ನಿಗದಿತ ವೇಳೆಗೆ ಪೂರ್ಣಗೊಳಿಸಲು ಎಂಜಿನಿಯರುಗಳಿಗೆ ಸೂಚಿಸಲಾಗಿದೆ. ಕಾಮಗಾರಿಯ ಗುಣಮಟ್ಟ ಕಾಪಾಡಲು ಗುತ್ತಿಗೆದಾರರಿಗೆ  ತಿಳಿಸಲಾಗಿದೆ.ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿ ನಾಗರಿಕರ ಸಹಭಾಗಿತ್ವ ಅಗತ್ಯ ಎಂದು ಅವರು ಕೋರಿದರು.

ಬಿಬಿಎಂಪಿ ಸದಸ್ಯ ಎನ್.ವೀರಣ್ಣ, ಮುಖಂಡ ತಿರುಪುರ ಶ್ರೀನಿವಾಸ್, ಮಂಜುನಾಥ ರೆಡ್ಡಿ, ವೆಂಕಟೇಶ ಶೆಟ್ಟಿ, ಆರಾಧ್ಯ, ಜಗದೀಶ್ ಮೊದಲಾದವರು  ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry