ಶುಕ್ರವಾರ, ಮೇ 27, 2022
27 °C

ಶಾಸಕರ ಗಣಿ ಗದ್ದಲ: ಮಾ. 5ಕ್ಕೆ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಣಿ ಗದ್ದಲಕ್ಕೆ ಸಂಬಂಧಿಸಿದಂತೆ ಕೊಟ್ಟಿರುವ ನೋಟಿಸ್‌ಗೆ ಉತ್ತರ ನೀಡಲು ಅನೇಕ ಶಾಸಕರು ಸಮಯಾವಕಾಶ ಕೋರಿರುವ ಕಾರಣ ಈ ಕುರಿತ ವಿಚಾರಣೆಯನ್ನು ಮಾರ್ಚ್ 5ಕ್ಕೆ ಮುಂದೂಡಲಾಗಿದೆ.ಬಿಜೆಪಿಯ ಶ್ರೀಕಾಂತ ಕುಲಕರ್ಣಿ ನೇತೃತ್ವದಲ್ಲಿ ಸದನ ಸಮಿತಿ ನೇಮಿಸಿದ್ದು, ಅದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಜಿ.ಕರುಣಾಕರರೆಡ್ಡಿ, ಜಿ.ಜನಾರ್ದನ ರೆಡ್ಡಿ, ಶಾಸಕರಾದ ಜಿ.ಸೋಮಶೇಖರರೆಡ್ಡಿ, ಸುರೇಶಬಾಬು ಸೇರಿದಂತೆ ಇತರರಿಗೆ ನೋಟಿಸ್ ನೀಡಿತ್ತು. ಇವರೆಲ್ಲರೂ ನೋಟಿಸ್‌ಗೆ ಉತ್ತರ ನೀಡಲು ಸಮಯ ಕೇಳಿರುವ ಕಾರಣ ವಿಚಾರಣೆ ಮುಂದೂಡಲಾಗಿದೆ ಎಂದು ಕುಲಕರ್ಣಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.