ಶಾಸಕರ ನಗರ ಪ್ರದಕ್ಷಿಣೆ

7

ಶಾಸಕರ ನಗರ ಪ್ರದಕ್ಷಿಣೆ

Published:
Updated:

ರಾಮನಗರ: ನಗರದ ವಿವಿಧ ವಾರ್ಡ್‌ಗಳಲಿರ‌್ಲುವ ಕುಂದುಕೊರತೆಗಳನ್ನು ವೀಕ್ಷಿಸಿ ಸ್ಥಳದಲ್ಲಿಯೇ ಅಧಿಕಾರಿಗಳನ್ನು ಕರೆಸಿ ಪರಿಹಾರ ಸೂಚಿಸು ನಗರ ಪ್ರದಕ್ಷಿಣೆ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ರಾಜು ತಿಳಿಸಿದರು.ಸೋಮವಾರ ನಗರದ ಒಂದನೇ ವಾರ್ಡಿನ ಸಿಂಗ್ರಾಬೋವಿದೊಡ್ಡಿಯಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು.ನಗರದ ಸಮಸ್ಯೆಗಳನ್ನು ಗುರುತಿಸಿ ಶೀಘ್ರ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ವಾರ್ಡ್‌ಗಳ ಮೂಲ ಸೌಕರ್ಯಗಳ ಕೊರತೆ, ಒಳ ಚರಂಡಿ ವ್ಯವಸ್ಥೆಯ ದೋಷಗಳು, ಕುಡಿಯುವ ನೀರಿನ ಸಮಸ್ಯೆ ಇತ್ಯಾದಿಗಳನ್ನು ತಿಳಿಸಬೇಕು. ಖುದ್ದಾಗಿ ವೀಕ್ಷಿಸಿ ಸ್ಥಳದಲ್ಲಿಯೇ ಪರಿಹರಿಸಲಾಗುತ್ತದೆ ಎಂದರು.ಸಿಂಗ್ರಾಬೋವಿ ದೊಡ್ಡಿಯಲ್ಲಿ ಶೌಚಾಲಯದ ಕೊರತೆ ಕಂಡುಬಂದಿದೆ. 22.75ರ ಯೋಜನೆಯಡಿಯಲ್ಲಿ ಸಾರ್ವಜನಿಕರು ಶೌಚಾಲ ನಿರ್ಮಿಸಿಕೊಳ್ಳಲು ಹಣಕಾಸಿನ ನೆರವು ನೀಡಲಾಗುವುದು. ನಗರವಾಸಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಒಂದು ವೇಳೆ ಈ ಯೋಜನೆಯಡಿ ಶೌಚಾಲಯ ನಿರ್ಮಿಸಿಕೊಳ್ಳಲಾಗದವರಿಗೆ ಸಾರ್ವಜನಿಕ ಶೌಚಾಲಯ ನಿರ್ಮಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಿದರು.ನಗರದ ಒಂದು, ಎರಡು ಮತ್ತು ಮೂರನೇ ವಾರ್ಡಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ವೀಕ್ಷಿಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ನಗರಸಭೆ ಅಧ್ಯಕ್ಷ ಸಾಬಾನ್ ಸಾಬ್, ಉಪಾಧ್ಯಕ್ಷ ಬಿ.ಉಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಜೆ.ಮುಕುಂದರಾಜ್, ಆಯುಕ್ತ ಸಿದ್ಧರಾಜು, ವಿವಿಧ ಇಲಾಖೆಗಳ ಅಧಿಕಾರಿಗಳು ನಗರ ಪ್ರದಕ್ಷಿಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry