ಶಾಸಕರ ಮೇಲೆ ಹಲ್ಲೆ: ವಿವಿಧೆಡೆ ಪ್ರತಿಭಟನೆ

ಸೋಮವಾರ, ಮೇ 20, 2019
30 °C

ಶಾಸಕರ ಮೇಲೆ ಹಲ್ಲೆ: ವಿವಿಧೆಡೆ ಪ್ರತಿಭಟನೆ

Published:
Updated:

ನಾಗಮಂಗಲ: ತಾಲ್ಲೂಕಿನ ಬಿದರಕೆರೆ ಗ್ರಾಮದಲ್ಲಿ ಅದೇ ಗ್ರಾಮದ ಯುವಕ ಸಂತೋಷ್ ಎಂಬಾತನಿಂದ ಶಾಸಕ ಕೆ.ಸುರೇಶ್‌ಗೌಡ ಹಲ್ಲೆಗೆ ಒಳಗಾಗಿರುವ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ.ಹರಿಜನ ಕಾಲೋನಿಯಲ್ಲಿ ಗಣಪತಿ ವಿಸರ್ಜನಾ ಕಾರ್ಯಕ್ರಮ ಹಾಗೂ ಪಿತೃಪಕ್ಷ ಹಬ್ಬವಿತ್ತು. ರಾತ್ರಿ 11ರ ಸುಮಾರಿಗೆ ಶಾಸಕರು ಕಾರ್ಯಕ್ರಮ ಮುಗಿಸಿಕೊಂಡು ವಾಪಸು ಕಾರು ಹತ್ತುವಾಗ ಯುವಕರ ಗೊಂಪೊಂದು ಕಾರ್ಯಕ್ರಮದ ಪ್ರಾಯೋಜಕತ್ವ ಕುರಿತು ಶಾಸಕರ ಜೊತೆ ಮಾತುಕತೆಯಲ್ಲಿ ತೊಡಗಿತ್ತು. ಇದೇ ವೇಳೆ ಇನ್ನೊಂದು ಗುಂಪಿನ ಮಧ್ಯದಿಂದ ಕೆಲವು ದುಷ್ಕರ್ಮಿಗಳು ಕಲ್ಲು  ಎಸೆದಿದ್ದಾರೆ.ಮೊದಲನೆ ಕಲ್ಲು ಆಟೋ ಒಂದರ ಗಾಜನ್ನು ಪುಡಿ ಮಾಡಿದೆ. ಎರಡನೇ ಕಲ್ಲು ಶಾಸಕರ ತಲೆಯ ಬಲ ಭಾಗಕ್ಕೆ ಬಿದ್ದು ರಕ್ತ ಸ್ರಾವದಿಂದ ಸ್ಥಳದಲ್ಲಿಯೇ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಬಿ.ಜಿ. ನಗರದ ಎ.ಸಿ.ಗಿರಿ ಆಸ್ಪತ್ರೆಗೆ ದಾಖಲು ಮಾಡಿ ತಲೆಗೆ 5 ಹೊಲಿಗೆ ಹಾಕಿ, ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು.ಸಂತೋಷ್ ಎಂಬಾತ ಕಲ್ಲು ಹಾಗೂ ಮೊಟ್ಟೆ ಹಿಡಿದು ಶಾಸಕರೆಡೆಗೆ ಎಸೆಯುವ ವೇಳೆ ಗ್ರಾಮಸ್ಥರು ಸ್ಥಳದಲ್ಲಿಯೇ ಆತನನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ. ಹರೀಶ್ ಹಾಗೂ ನಟರಾಜ್ ಎಂಬುವರ್ನು ಬುಧವಾರ ಬೆಳಿಗ್ಗೆ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೋಲೀಸ್  ಮೂಲಗಳು ತಿಳಿಸಿವೆ. ಇದೇ ವೇಳೆ ಶಾಸಕರ ಅಂಗರಕ್ಷಕ ಹಾಗೂ ರೋಜಾ ಎಂಬ ಬಾಲಕಿ ತಲೆಗೂ ಗಾಯಗಳಾಗಿವೆ.ರಸ್ತೆ ತಡೆ: ಶಾಸಕ ಕೆ.ಸುರೇಶ್‌ಗೌಡರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ತಾಲ್ಲೂಕಿನಾದ್ಯಂತ ವಿವಿಧೆಡೆ ಬುಧವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.ಪಟ್ಟಣದ ಟಿ.ಬಿ. ಬಡಾವಣೆಯ ಬಿಜಿಎಸ್ ವೃತ್ತದಿಂದ ಮೆರವಣಿಗೆ ಹೊರಟು ಪಟ್ಟಣದ ಟಿ.ಮರಿಯಪ್ಪ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿದರು. ಟೈರ್‌ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದ ಪರಿಣಾಮ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಮಂಡ್ಯ ಜಿಲ್ಲಾ ಡಿವೈಎಸ್ಪಿ ಚನ್ನಬಸವಣ್ಣ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಈ ಕೃತ್ಯಕ್ಕೆ ಯಾರೇ ಕುಮ್ಮಕ್ಕು ನೀಡಿದ್ದರೂ ಅವರನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಶಿರಸ್ತೇದಾರ್ ರಾಮಪ್ಪನವರಿಗೆ ಮನವಿ ಸಲ್ಲಿಸಲಾಯಿತು.ಮುಖಂಡರಾದ ಬಿ.ಸಿ.ಮೋಹನ್‌ಕುಮಾರ್, ಮುಳುಕಟ್ಟೆ ಶಿವರಾಮಯ್ಯ, ಬಸವೇಗೌಡ, ಹನುಮಂತು, ನಾಗೇಶ್, ಕೆಂಪೇಗೌಡ, ಗ್ರಾ.ಪಂ. ಸದಸ್ಯ ನಾಗರಾಜು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ತಾಲ್ಲೂಕಿನ ಕದಬಹಳ್ಳಿ, ಬೆಳ್ಳೂರು ಕ್ರಾಸ್‌ಗಳಲ್ಲೂ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಬಿಂಡಿಗನವಿಲೆ ಹೋಬಳಿಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.ಬಂದ್‌ಗೆ ಕರೆ: ಶುಕ್ರವಾರದ ಒಳಗೆ ಶಾಸಕರ ಮೇಲೆ ಹಲ್ಲೆ ನಡೆಸಿದವರಿಗೆ ಸೂಕ್ತ ಶಿಕ್ಷೆ ನೀಡದಿದ್ದರೆ ಶುಕ್ರವಾರ ತಾಲ್ಲೂಕು ಬಂದ್ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯರಾದ ಹುಚ್ಚೇಗೌಡ, ಚಂದ್ರೇಗೌಡ, ಮಣ್ಣಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗುರುಮೂರ್ತಿ ಎಚ್ಚರಿಕೆ ನೀಡಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry