ಶಾಸಕ ಕುಮಾರಸ್ವಾಮಿ ವಿರುದ್ಧ ದೂರು

7

ಶಾಸಕ ಕುಮಾರಸ್ವಾಮಿ ವಿರುದ್ಧ ದೂರು

Published:
Updated:

ಶಿವಮೊಗ್ಗ: ಶಿಕ್ಷಕಿಯೊಬ್ಬರಿಂದ ಹಣ ಪಡೆದು ನಿವೇಶನ ನೀಡದೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿಯ ಸಿಂಡಿಕೇಟ್ ಬ್ಯಾಂಕ್ ಎಂಪ್ಲಾಯ್ಸ ಹೌಸಿಂಗ್ ಕೋ- ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರೂ ಆದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಜಿ. ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್‌ಐಆರ್ ದಾಖಲಾಗಿದೆ.ನಗರದ ವಿನೋಬನಗರ 60 ಅಡಿ ರಸ್ತೆಯ ನಿವಾಸಿ ಶಿಕ್ಷಕಿ ಡಿ. ದಾಕ್ಷಾಯಣಮ್ಮ, ಸಿಂಡಿಕೇಟ್ ಬ್ಯಾಂಕ್ ಎಂಪ್ಲಾಯ್ಸ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಶಶಿಕಾಂತ್, ಕಾರ್ಯದರ್ಶಿ ಅಶೋಕ್‌ಕುಮಾರ್ ವಿರುದ್ಧ 2ನೇ ಜೆಎಂಎಫ್ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಲಯ, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಸೂಚಿಸಿತ್ತು. ಅದರಂತೆ ಈ ಮೂವರ ವಿರುದ್ಧ ಕಾಯ್ದೆ 154ರ ಅಡಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry