ಭಾನುವಾರ, ಅಕ್ಟೋಬರ್ 20, 2019
28 °C

ಶಾಸಕ ಕೃಷ್ಣಪ್ಪ ಪ್ರಕರಣ: ಸೋಮವಾರ ಆದೇಶ

Published:
Updated:

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ರಾಜಾಜಿನಗರ ನಿವಾಸಿ ಎಚ್.ಸಿ.ಪ್ರಕಾಶ್ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸುವ ಸಂಬಂಧದ ಆದೇಶ ಪ್ರಕಟಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.

ಕೃಷ್ಣಪ್ಪ, ಅವರ ಪುತ್ರ ಹಾಗೂ ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ಪತ್ನಿ ಪ್ರಿಯದರ್ಶಿನಿ ಹಾಗೂ ಪುತ್ರ ಪ್ರದೀಪ್ ವಿರುದ್ಧ ಸೋಮವಾರ ಪ್ರಕಾಶ್ ದೂರು ಸಲ್ಲಿಸಿದ್ದರು. ಈ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕೇ, ಬೇಡವೇ ಎಂಬುದರ ಬಗ್ಗೆ ಗುರುವಾರ ಆದೇಶ ಹೊರಡಿಸುವುದಾಗಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಸಮಯ ನಿಗದಿ ಮಾಡಿದ್ದರು.

ಆದರೆ, ಗುರುವಾರ ಪ್ರಕರಣ ವಿಚಾರಣೆ ಬಂದಾಗ ಆದೇಶ ಪ್ರಕಟಣೆಯನ್ನು ಸೋಮವಾರಕ್ಕೆ ಮುಂದೂಡಿದರು. ಆದೇಶ ಇನ್ನೂ ಸಿದ್ಧವಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ವಿಚಾರಣೆ ಮುಂದೂಡುತ್ತಿರುವುದಾಗಿ ನ್ಯಾಯಾಧೀಶರು ಈ ಸಂದರ್ಭದಲ್ಲಿ ತಿಳಿಸಿದರು.

Post Comments (+)