ಭಾನುವಾರ, ಏಪ್ರಿಲ್ 11, 2021
25 °C

ಶಾಸಕ ನಾಡಗೌಡ ವಿರುದ್ಧ ಜೀವ ಬೆದರಿಕೆ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು (ರಾಯಚೂರು ಜಿ):  ತಮಗೆ ಶಾಸಕ ವೆಂಕಟರಾವ್ ನಾಡಗೌಡ, ಅವರ ಸಹೋದರ ಬಸವರಾಜ ನಾಡಗೌಡ ಮತ್ತವರ ಬೆಂಬಲಿಗರು ಜೀವ ಬೆದರಿಕೆ ಹಾಕಿದ್ದಾರೆ ಎಂದು ತಾಲ್ಲೂಕಿನ ಜವಳಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗುರುರಾಜ ದೇಸಾಯಿ ಬಳಗಾನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಸಬ್ ಇನ್‌ಸ್ಪೆಕ್ಟರ್ ಬಾಳನಗೌಡ ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಸಿಬ್ಬಂದಿಯ ವರ್ಗಾವಣೆ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ದೂರವಾಣಿಯಲ್ಲಿ ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಗುರುರಾಜ ದೇಸಾಯಿ ದೂರಿನಲ್ಲಿ ತಿಳಿಸಿದ್ದಾರೆ.ಮಹಿಳಾ ಸಿಬ್ಬಂದಿಗೆ ಕಿರುಕುಳ:  ವೈದ್ಯಾಧಿಕಾರಿ ಡಾ.ಗುರುರಾಜ ದೇಸಾಯಿ ನೀಡಿರುವ ಕಿರುಕುಳದಿಂದ ಬೇಸತ್ತು ಆಸ್ಪತ್ರೆಯ ಮಹಿಳಾ ಸಿಬ್ಬಂದಿ ತಮ್ಮ ಬಳಿಗೆ ಬಂದು ಕಷ್ಟ ಹೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವರ್ತನೆಯನ್ನು ಪ್ರಶ್ನಿಸಿದ್ದಕ್ಕೆ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದರೆ ಮಾಡುವುದೇನಿದೆ ಎಂದು ಶಾಸಕ ವೆಂಕಟರಾವ್ ನಾಡಗೌಡ ಅವರು `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿದರು.ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡಿರುವ ಮತ್ತು ತಮ್ಮ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ ವಿಧಾನಸಭಾ ಅಧ್ಯಕ್ಷರ ಗಮನಕ್ಕೆ ತರುವುದಾಗಿ ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.