ಶಾಸಕ ಮಂಜು ಜೆಡಿಎಸ್ ಏಜೆಂಟ್: ಆರೋಪ

7

ಶಾಸಕ ಮಂಜು ಜೆಡಿಎಸ್ ಏಜೆಂಟ್: ಆರೋಪ

Published:
Updated:

ಹಾಸನ: `ಅರಕಲಗೂಡು ಶಾಸಕ ಎ. ಮಂಜು ಜೆ.ಡಿ.ಎಸ್. ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ' ಎಂದು ಅವರದೇ ಪಕ್ಷ(ಕಾಂಗ್ರೆಸ್)ದ ರಾಜ್ಯ ಕಾರ್ಯಕಾರಿ ಸಮಿತಿ ಮಾಜಿ ಸದಸ್ಯ ಎಚ್.ಆರ್. ನಾರಾಯಣ್ ಆರೋಪಿಸಿದ್ದಾರೆ.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪ ಮಾಡಿರುವ ಅವರು, `ಆಗಸ್ಟ್ 31 ರಂದು ಹೊಳೆನರಸೀಪುರ ತಾಲ್ಲೂಕಿನ ಬೆಟ್ಟದಗುಳದಪುರದಲ್ಲಿ ನಡೆದ ವಿವಿಧ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರಿಗೂ ಮಾಹಿತಿ ನೀಡಿರಲಿಲ್ಲ. ಅಲ್ಲದೇ ಕಾರ್ಯಕ್ರಮ ನಡೆದ ಗ್ರಾಮ ಅರಕಲಗೂಡು ಕ್ಷೇತ್ರಕ್ಕೆ ಸೇರುತ್ತದೆ. ಈ ಗ್ರಾಮ ಎಚ್.ಡಿ. ರೇವಣ್ಣ ಅವರ ವ್ಯಾಪ್ತಿಗೆ ಬರದಿದ್ದರೂ ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತರನ್ನು ಹಾಗೂ ರೇವಣ್ಣ ಅವರನ್ನು ಕರೆತಂದು ಕಾರ್ಯಕ್ರಮ ನಡೆಸಿದ್ದಾರೆ ಎಂದರು.`ಹಿಂದಿನಿಂದಲೂ ಮಂಜು ಅವರು ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬಕ್ಕೆ ಸಹಾಯ ನೀಡುತ್ತಾ ಬಂದಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆ ಯಲ್ಲೂ ಹೊಳೆನರಸೀಪುರ ಕ್ಷೇತ್ರದಲ್ಲಿ ಶಾಸಕ ರೇವಣ್ಣ ಅವರ ಗೆಲುವಿಗೆ ಸಹಕಾರ ನೀಡಿದ್ದಾರೆ. ಮಂಜು ಅವರ ನಿಲುವಿನಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ ಎಂದರು.ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ಬಗ್ಗೆ ದೂರು ನೀಡಲಾಗುವುದು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಮಂಜು ತಮ್ಮ ಸ್ಪಷ್ಟ ನಿಲುವು ವ್ಯಕ್ತಪಡಿಸಬೇಕು' ಎಂದು ಅವರು ಆಗ್ರಹಿಸಿದರು.ಕಾಂಗ್ರೆಸ್ ಮುಖಂಡ ಮಂಜೇಗೌಡ, ಸ್ವಾಮೀಗೌಡ, ನಂಜೇಗೌಡ ಹಾಗೂ ನಂಜುಂಡೇಗೌಡ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry